ಕರ್ನಾಟಕದಲ್ಲಿ 17ದಿನ ಶಾಲಾ ರಜೆ ಎಲ್ಲಿಂದ ಎಲ್ಲಿವರೆಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

ಅಕ್ಟೋಬರ್​ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್​​ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.