ಬಿದರ್: ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರು ಚಿಡಗುಪ್ಪಾ ತಾಲೂಕಿನ ನಾಗನಕೇರಾ ಗ್ರಾಮಕ್ಕೆ ಭೇಟಿ ನೀಡಿ, ಅತಿವೃಷ್ಟಿಯಿಂದ ಸ್ಥಳೀಯ ಕೆರೆಯ ಹಿನ್ನೀರ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಸಚಿವರು ಸ್ಥಳೀಯರಿಗೆ ನೀಡಲಾಗಿರುವ ಸೌಲಭ್ಯಗಳನ್ನು ಅವಲೋಕಿಸಲು, ಗ್ರಾಮದಲ್ಲಿ ಸ್ಥಾಪಿಸಲಾದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿನ್ನೀರದಿಂದ 20ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ, ಅತಿವೃಷ್ಟಿ ಬಂದಾಗ ಈ ರೀತಿಯ ಪರಿಸ್ಥಿತಿ ಉಂಟಾಗುತ್ತಿದ್ದು, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮನೆಗಳನ್ನು ಬೇರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಅಗತ್ಯವಿದ್ದು, ಸರ್ಕಾರದ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನನ್ನು ಖರೀದಿಸಿ, ಅದರ ವೆಚ್ಚವನ್ನು ಕೂಡ ಸರ್ಕಾರವೇ ಭರಿಸಿ ಸರಕಾರದ ಮೂಲಕ ಮನೆಗಳನ್ನು ನಿರ್ಮಾಣ ಮಾಡಲು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ, ಬೆಳೆ ಹಾನಿಯ ಕುರಿತು ಸಮೀಕ್ಷೆ ನಡೆಸಿ, ಪರಿಹಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.