ಸರ್ಕಾರವನ್ನು ಟೀಕಿಸಿದ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಾರದು – ಸುಪ್ರೀಂ ಕೋರ್ಟ್

ನವದೆಹಲಿ : ಸರ್ಕಾರವನ್ನು ಟೀಕಿಸುವ ವರದಿ

ಹಾಗೆ ಮಾಡಿದ ಪತ್ರಕರ್ತರ ವಿರುದ್ಧ ಸರ್ಕಾರಗಳು ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಠಿಣ ಸೂಚನೆ ನೀಡಿದೆ.

 

ಉತ್ತರ ಪ್ರದೇಶ ಸರ್ಕಾರದ ಆಡಳಿತ ನೀತಿಯನ್ನು ಪ್ರಶ್ನಿಸಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ವಿರುದ್ಧ ಪ್ರಕರಣ ದಾಖಲಾಗಿತ್ತು.

 

ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ ನೇತೃತ್ವದ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ್ದು, ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನದ 17 (1) ವಿಧಿಯಡಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶವಿದೆ. ಸರ್ಕಾರವನ್ನು ಟೀಕಿಸುವ ಪತ್ರಕರ್ತರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುತ್ತದೆ,

 

ಆಡಳಿತದ ನಡವಳಿಕೆ ಮತ್ತು ಯೋಜನೆಗಳನ್ನು ಟೀಕಿಸುವ ಪ್ರಕರಣದ ಬೆದರಿಕೆ ಹಾಕಬೇಡಿ

 

ಇದು ಸಂವಿಧಾನ ವಿರೋಧಿ ಕ್ರಮವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ವಿರುದ್ಧ ಯಾವುದೇ ಆತುರದ ಕ್ರಮ ಕೈಗೊಳ್ಳದಂತೆ ಎಚ್ಚರಿಕೆ ನೀಡಿದ ನ್ಯಾಯಾಲಯ, ಪ್ರಕರಣಕ್ಕೆ ತಡೆ ಕೋರಿ ಸಲ್ಲಿಸಿರುವ ಅರ್ಜಿಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.