ಬೀದರ, : ಕನ್ನಡ ನಮ್ಮೆಲ್ಲರನ್ನು ಒಗ್ಗೂಡಿಸುತ್ತದೆ. ಎಲ್ಲರೂ ಕನ್ನಡ ಮಾತನಾಡಲಿ, ಕನ್ನಡಿಗರೆಲ್ಲರೂ ಒಗ್ಗಟ್ಟಾಗಲಿ, ಕನ್ನಡವೇ ನಮ್ಮ ಆಸ್ಮಿತೆ, ಕನ್ನಡದ ಬಗ್ಗೆ ಸ್ವಾಭಿಮಾನವಿರಲಿ, ಕನ್ನಡ ನಾಡು, ನುಡಿ, ನೆಲ, ಜಲ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರೋಗೋಣ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಇಂದು 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡನಾಡಿನ ಇತಿಹಾಸ, ಪರಂಪರೆ, ಸಾಂಸ್ಕೃತಿಕ, ಆಧ್ಯಾತ್ಮಿಕ ಹಿರಿಮೆಯು ತುಂಬಾ ವೈಶಿಷ್ಟತೆಗಳಿಂದ ಕೂಡಿದೆ. ರಾಜ-ಮಹಾರಾಜರು ಸಹ ತಮ್ಮ ಆಡಳಿತದ ಕಾಲಾವಧಿಯಲ್ಲಿ ಕನ್ನಡ ನಾಡು-ನುಡಿ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರು ಹೇಳುವಂತೆ ಕರ್ನಾಟಕವು ಸರ್ವಜನಾಂಗದ ಶಾಂತಿಯತೋಟವಾಗಿದೆ. ಇದು ಬೀದರ್ ಜಿಲ್ಲೆಗೆ ಅತ್ಯಂತ ಹೆಚ್ಚು ಒಪ್ಪುತ್ತದೆ. ಬೀದರ್ ಜಿಲ್ಲೆಯಲ್ಲಿ ಬಸವಾದಿ ಶರಣರ ಪಾದಸ್ಪರ್ಶದಿಂದ ಪುನೀತವಾದ ಪುಣ್ಯಭೂಮಿ ಬಸವಕಲ್ಯಾಣವೂ ಇದೆ, ನಾನಕ್ಝೀರಾ ಗುರುದ್ವಾರವೂ ಇದೆ, ಮಹಮದ್ಗವಾನರ ಮದರಸಾ ಇದೆ, ಸಂತ ಪಾಲರಇಗರ್ಜಿಯೂ ಇದೆ, ಝರಣಿ ನರಸಿಂಹ ಸ್ವಾಮಿ, ಪಾಪನಾಶಿ ದೇವಾಲಯವೂ ಇದೆ ಎಂದರು.