ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಜಯಪುರ ವತಿಯಿಂದ ನಶೆ ಮುಕ್ತ ಕ್ಯಾಂಪಸ್ ಅಭಿಯಾನದ ಪೋಸ್ಟರ್ ಅನ್ನು ನಗರದ ಶ್ರೀ ಬಿ ಎಂ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನರ್ಸಿಂಗ್ ಕಾಲೇಜಿನಲ್ಲಿ ಬಿಡುಗಡೆ ಮಾಡಿ, ರಾಜ್ಯ ಕಾರ್ಯಕರ್ಣಿ ಸದಸ್ಯ ಪ್ರವೀಣ ಬಿರಾದಾರ ಮಾತನಾಡಿ ಭಾರತ ದೇಶವು ತನ್ನದೇ ಆದ ಜನತೆ ವೈಶಿಷ್ಟ್ಯತೆ ಹೊಂದಿ ಶತಮಾನಗಳಿಂದ ಅನೇಕ ದೇಶಗಳಿಗೆ ಮಾದರಿಯಾಗುತ್ತಾ ಬಂದಿದೆ ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳಿಗೆ ವಿದ್ಯಾರ್ಥಿಗಳು ಅತಿ ಹೆಚ್ಚು ಬಲಿಯಾಗುತ್ತಿದ್ದಾರೆ ಅದರಿಂದ ಎಷ್ಟೋ ಜನ ಈ ಮಾದಕ ವಸ್ತುಗಳಿಗೆ ಅಂಟಿಕೊಂಡು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಇತ್ತೀಚಿನ ಸಂಸತ್ತಿನ ಸ್ಥಾಯಿ ಸಮಿತಿ ಒಂದು ನೀಡಿದ ವರದಿ ಪ್ರಕಾರ ಮಾದಕ ವಸ್ತುಗಳ ಪೂರೈಕೆಯ ಜಾಲದ ಟಾರ್ಗೆಟ್ ಶಾಲಾ ಕಾಲೇಜು ವಿದ್ಯಾರ್ಥಿಗಳು ಆಗಿದ್ದಾರೆ,ಆದ್ದರಿಂದ, ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಿ ಜಾಗೃತಿ ಮೂಡಿಸಲು ಎಬಿವಿಪಿ ಈ ಒಂದು ನಷೆ ಮುಕ್ತ ಕ್ಯಾಂಪಸ್ ಎನ್ನುವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಮಾತನಾಡಿದರು . ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಮಂಜುನಾಥ ಹಳ್ಳಿ, ಮಾತನಾಡಿ ಇತ್ತೀಚಿನ ವಿದ್ಯಮಾನಗಳನ್ನು ಗಮನಿಸಿದರೆ ಅತಿ ಹೆಚ್ಚು ವಿದ್ಯಾರ್ಥಿಗಳು ತಂಬಾಕು ಗುಟ್ಕಾ ಹಾಗೂ ಅನೇಕ ಇನ್ನಿತರ ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ, ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ಜೀವನದಲ್ಲಿ ಈ ತರಹದ ಮಾದಕ ವಸ್ತುಗಳಿಗೆ ಬಲಿಯಾಗಿ ಪ್ರಾಣವನ್ನು ಕಳೆದುಕೊಳ್ಳುವುದರಿಂದ ತಮ್ಮ ಕುಟುಂಬಕ್ಕೆ ಹಾಗೂ ದೇಶಕ್ಕೆ ಅನ್ಯಾಯ ಮಾಡಿದಂತಾಗುತ್ತದೆ, ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ಈ ಮಾದಕ ವಸ್ತುಗಳಿಗೆ ಬಲಿಯಾಗಬಾರದು ತಮ್ಮ ಪ್ರಾಣವನ್ನು ಕಳೆದುಕೊಳ್ಳಬಾರದು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಎಬಿವಿಪಿ ಈ ನಶೆ ಮುಕ್ತ ಜಾಗೃತಿ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ : ದೌಲಪ್ಪ ಮನಗೋಳಿ