ಇಂದು ದೆಹಲಿಯ ಪಾರ್ಲಿಮೆಂಟ್ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಸಂಸದರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಅವರ ನೇತೃತ್ವದಲ್ಲಿ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ, ಇಂದು ಸಂಸತ್ ಆವರಣದಲ್ಲಿ ವಿರೋಧಪಕ್ಷದ ಸಂಸದರು ಎಲ್ಲರೂ ಒಟ್ಟುಗೂಡಿ ಕೇಂದ್ರ ಸರ್ಕಾರ ದ ಗೃಹ ಸಚಿವರಾದ ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದರು, ಶಾ ಅವರು ಕ್ಷಮೆಯಾಚಿಸಿ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಈ ವೇಳೆಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ ಖಂಡ್ರೆ ರವರು, ಸಂಸದರಾದ ಕೆ ರಾಜಶೇಖರ್ ಬಸವರಾಜ್ ಹಿಟ್ನಾಳ್, ಈ ತುಕಾರಾಮ, ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಾಟೀಲ್, ಜಿ ಕುಮಾರ್ ನಾಯಕ ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.