ರಾಜ್ಯವನ್ನೇ ಬೆಚ್ಚಿಬೀಳಿಸಿದ ಬೀದರ್ ದರುಡೆ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ

ನಿನ್ನೆ ಬೀದರ್‌ ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು.

 

ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಲಾಯಿತು.

 

ಬ್ಯಾಂಕ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದರು.

error: Content is protected !!