ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದ ಬಳಿ ಇಂದು ಮುಂಜಾನೆ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಸವಾರನು ಸ್ಥಳದಲ್ಲಿಯೆ ಸಾವನ್ನಪ್ಪಿದ ಘಟನೆ ಜರುಗಿದೆ.
ಗದಗ ನಗರದಿಂದ ಮುಂಡರಗಿ ಪಟ್ಟಣಕ್ಕೆ ಸಂಚರಿಸುತ್ತಿದ್ದ ಮುಂಡರಗಿ ಸಾರಿಗೆ ಘಟಕದ ಕೆಎ-26 ಎಫ್-1100 ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಈ ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರನು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಾದಿಗನೂರು ಗ್ರಾಮದ ವಸಂತ್ ತಂದೆ ವಿರೇಶ್ ಮುಳವಾರ (ವ.19) ಎಂದು ತಿಳಿದು ಬಂದಿದೆ.
ಮೃತ ದುರ್ಧೈವಿ ಯುವಕ ವಸಂತನು ಸುಜಲಾನ್ ಗಾಳಿ ವಿದ್ಯುತ್ ಕಂಪನಿ ಡಂಬಳದಲ್ಲಿ ಖಾಸಗಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದನು ಎಂದು ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಘಟನೆಯ ಸ್ಥಳಕ್ಕೆ ಸಂಚಾರಿ ಗಸ್ತು ಪೋಲಿಸರು ಬೇಟಿ ನೀಡುವ ಮೂಲಕ ಪರಿಶೀಲನೆ ನಡೆಸಿದ್ದಾರೆ.