‘ವಾರ್ತಾಭಾರತಿ’ ವರದಿಗಾರರಾದ ಇಬ್ರಾಹಿಂ ಅಡ್ಕಸ್ಥಳಗೆ ‘ವಾರ್ಷಿಕ ಪ್ರಶಸ್ತಿ, ಅಖೀಲ್ಗೆ ‘ಪ್ರಜಾ ಸಂದೇಶ’ ದತ್ತಿ ಪ್ರಶಸ್ತಿ
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇಂದು ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023 ಮತ್ತು 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
2023ನೆ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಹಾಗೂ 2024ನೆ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ಭಾಜನರಾದ ‘ವಾರ್ತಾಭಾರತಿ’ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
‘ವಾರ್ತಾಭಾರತಿ’ ವರದಿಗಾರರಾದ ಇಬ್ರಾಹಿಂ ಅಡ್ಕಸ್ಥಳ ಅವರು ‘ವಾರ್ಷಿಕ ಪ್ರಶಸ್ತಿ, ಮುಹಮ್ಮದ್ ಅಖೀಲ್ ‘ಪ್ರಜಾ ಸಂದೇಶ’ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಬಿ.ಕಾವೇರಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಳರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.