ಕಲಬುರಗಿ: ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಕೊಟ್ಟಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿ, ಜೇವರ್ಗಿ ಜೆಎಮ್‌ಎಫ್‌ಸಿ ಕೋರ್ಟ್ ಆದೇಶ ಹೊರಡಿಸಿದೆ.
ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಬೈಕ್ ಅನ್ನು ಯಡ್ರಾಮಿ ಠಾಣೆಯ ಪೊಲೀಸರು ತಪಾಸಣೆ ವೇಳೆ ವಶಪಡಿಸಿಕೊಂಡಿದ್ದರು.
ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ ಜೇವರ್ಗಿ ಜೆಎಮ್‌ಎಫ್‌ಸಿ ಕೋರ್ಟ್ ನ್ಯಾಯಾಧೀಶರು, ಅಪ್ರಾಪ್ತ ಬಾಲಕನಿಗೆ ಬೈಕ್ ನಡೆಸಲು ಕೊಟ್ಟಿದ್ದ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ.
ಅಲ್ಲದೆ, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಬೈಕ್ ಚಲಾಯಿಸಲು ಅವಕಾಶ ಕೊಡದಂತೆ ಕೋರ್ಟ್ ಸೂಚನೆ ನೀಡಿದೆ.