ಕಳೆದ ದಿನಾಂಕ 6 ರಂದು ನಡೆದ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಮುಸ್ಲಿಂ ಸಮಾಹದ ವತಿಯಿಂದ ಪ್ರತಿಭಟನೆ ನಡೆಯಿತು.
ನೆರೆಯ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಬೋರಗಿ ಹೊಬಳಿಯ ಕರ್ಜಗಿ ಗ್ರಾಮದಲ್ಲಿ 4 ವರ್ಷಿನ ಚಿಕ್ಕ ಮಗುವಿನ ಮಗುವಿನ ಮೇಲೆ ದೌರ್ಜನ್ಯ ಎಸೆಗಿ ಹತ್ಯೆಗೈಯಲಾಗಿತ್ತು.ಈ ಹಿನ್ನೆಲೆಯಲ್ಲಿ ವಿಜಯಪುರ ನಗರದ ಡಾ।। ಬಿ.ಆರ್. ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವರೆಗೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಸಮಾಜದ ಮುಖಂಡರು ವಿಕೃತಕಾಮಿ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿದರು.
ಈ ವೇಳೆ ಪುಟ್ಟ ಬಾಲಕಿಯ ಕುಟುಂಬಕ್ಕೆ ರಕ್ಷಣೆ ಹಾಗೂ ಪರಿಹಾರದ ಜೊತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದರು.
ವರದಿ : ಎಂ.ಡಿ ಸೊಹೆಲ್ ಭೈರಕದಾರ