ಬೀದರ್ | ಟಿಟಿ ವಾಹನ – ಬೈಕ್‌ ಮುಖಾಮುಖಿ ಡಿಕ್ಕಿ; ವೈದ್ಯ ಸಾವು

ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.
ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಥೆ (58) ಮೃತರು. ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿದ್ದ ನೀಲಕಂಠರಾವ್ ಅವರು ಸಂತಪೂರ ಗ್ರಾಮದಲ್ಲಿ ಆಸ್ಪತ್ರೆ ನಡೆಸುತ್ತಿದ್ದರು.

ಸೋಮವಾರ ಬೆಳಿಗ್ಗೆ ಬೀದರ್‌ ದಿಂದ ಸಂತಪೂರ ಕಡೆಗೆ ಬೈಕ್ ಮೇಲೆ ಬರುತ್ತಿದ್ದರು. ಈ ವೇಳೆ ಔರಾದ್ ಕಡೆಯಿಂದ ಬರುತ್ತಿದ್ದ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-161ಎ ರಲ್ಲಿ ಪ್ರಗತಿಯಲ್ಲಿರುವ ಟೋಲ್ ಗೇಟ್ ಸಮೀಪ ಘಟನೆ ಜರುಗಿದ್ದು ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂತಪೂರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತಪೂರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರದಿ : ಜಾನ್ಸನ್ ಉಜನಿ

error: Content is protected !!