ನೂತನ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ರವರು ತಮ್ಮ ಕಚೇರಿಯಲ್ಲಿನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸ್ವತಂತ್ರ ಹೋರಾಟಗಾರ ಶಹೀದ್ ಭಗತ್ ಸಿಂಗ್ ರವರ ಭಾವಚಿತ್ರಗಳನ್ನು ತೆಗೆದು ಹಾಕಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿ ವತಿಯಿಂದ ನಾಳೆ ದಿನಾಂಕ 27/02/2025 ರಂದು ಬೆಳಗ್ಗೆ 10:30 ಗಂಟೆಗೆ ಹುಮನಾಬಾದ್ ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ವರೇಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ತಾಲೂಕಿನ ದಲಿತ ಮುಖಂಡರು, ಯುವಕರು ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು
ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರಾಹುಲ್ ಉದ್ದಾ ದುಬಲಗುಂಡಿ
ಮನವಿ ಮಾಡಿದರು.