ಹೆಚ್ಚು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಕಮಲನಗರ: ಪಟ್ಟಣ ಸಮೀಪದ ಡಿಗ್ಗಿ ಗ್ರಾಮದ 9ನೇ ತರಗತಿಯಲ್ಲಿ ಓದುತ್ತಿದ್ದ
ಬಾಲಕಿ ಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ.

ಸೋನಿ ಸಂತೋಷ ಬನವಾಸೆ (15) ಮೃತ ಪಟ್ಟವಳು ಎಂದು ಗುರುತಿಸಲಾಗಿದೆ.

ಮಗಳಿಗೆ ಮೊಬೈಲ್ ಹೆಚ್ಚು ಬಳಕೆ ಮಾಡಬಾರದು ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ತಂದೆ ಸಂತೋಷ ಬನವಾಸೆ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ರಾಚಯ್ಯ ಸ್ವಾಮಿ

error: Content is protected !!