ಅಗ್ನಿಶಾಮಕ ಸೇವಾ ದಿನಾಚರಣೆ

ಚಿಂಚೋಳಿ ಚಂದಾಪುರ ಪಟ್ಟಣದ ಅಗ್ನಿಶಾಮಕ ಠಾಣೆಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಹಾಗೂ
14ನೇ ಏಪ್ರಿಲ್-1944 ರಂದು ಮುಂಬೈ ಬಂದರಿನ ವಿಕ್ಟೋರಿಯಾ ಡಾಕ್‌ನಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ “ಎಸ್.ಎಸ್.ಪೋರ್ಟ್ ಸೆಕೈನ್” ಎಂಬ ಹಡಗು ಘೋರ ಅಗ್ನಿ ಅನಾಹುತಕ್ಕೆ ಒಳಗಾಗಿದ್ದು, ಆ ಬೆಂಕಿಯನ್ನು ನ೦ದಿಸಲು ಮುಂಬೈ ಫೈರ್ ಬ್ರಿಗೇಡ್‌ ನ ಅಧಿಕಾರಿ/ಸಿಬ್ಬಂದಿಯವರು ಕಾರ್ಯ ನಿರತರಾಗಿದ್ದ ಸಂದರ್ಭದಲ್ಲಿ ಹಡಗು ಸ್ಫೋಟಗೊಂಡು 66 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ವೀರ ಮರಣ ಹೊಂದಿದರು. ಈ ಹುತಾತ್ಮರ ನೆನಪಿಗಾಗಿ ಏಪ್ರಿಲ್-14 ರಂದು ಹುತಾತ್ಮರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು,
ಪ್ರತೀ ವರ್ಷ ಏಪ್ರಿಲ್-14 ರಿಂದ 20ವರೆಗಿನ ಸಪ್ತಾಹವನ್ನು ದೇಶದಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ. ಸಪ್ತಾಹದಲ್ಲಿ ಸಾರ್ವಜನಿಕರಿಗೆ ಅಗ್ನಿ ಸುರಕ್ಷತೆಯ ಬಗ್ಗೆ ತಿಳುವಳಿಕೆಯನ್ನು ನೀಡಿ, ಅಗ್ನಿಶಮನ ವಿಚಾರಗಳ ಬಗ್ಗೆ ಅಣಕು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ದೇಶದಾದ್ಯಂತ ಸಪ್ತಾಹದ ಮೊದಲ ದಿನವಾದ ಏಪ್ರಿಲ್-14 ರಂದು ಸಾರ್ವಜನಿಕರ ಪ್ರಾಣ ಮತ್ತು ಆಸ್ತಿ ರಕ್ಷಣಾ ಕಾರ್ಯದಲ್ಲಿ ತಮ್ಮ ಪ್ರಾಣವನ್ನು ಬಲಿದಾನಗೈದು ಅಮರರಾದ ವೀರ ಅಗ್ನಿಶಾಮಕರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಲಾಗುತ್ತಿದೆ ಎಂದು ಚಿಂಚೋಳಿ ಅಗ್ನಿಶಾಮಕದ ಠಾಣಾಧಿಕಾರಿ ಎಸ್ ಕೆ ಹಸನ್ ನವರು ಹೇಳಿದರು
ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ರಾಜೇಂದ್ರ ಪ್ರಸಾದ್

error: Content is protected !!