ಘಟಪ್ರಭಾ: ಪುರಸಭೆ ವ್ಯಾಪ್ತಿಯ ಈ-ಸ್ವತ್ತು ಉತಾರಗಳನ್ನು ನೀಡುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರಣ ಸಾರ್ವಜನರಿಗೆ ತೊಂದರೆ ಆಗುತ್ತಿರುವದನ್ನು ಸರಿಪಡಿಸುವಂತೆ ಆಗ್ರಹಿಸಿ ಕನ್ಕಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ ತಾಲೂಕಾ ಘಟಕದ ಮುಖಂಡರು ಹಾಗೂ ಪದಾಧಿಕಾರಿಗಳು, ಪ್ರತಿಭಟಿಸಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿ 20 ದಿನಗಳ ಒಳಗಾಗಿ ಸಾರ್ವಜನಿಕರ ಇ-ಸ್ವತ್ತು ಉತಾರಗಳ ಸಮಸ್ಯೆಯನ್ನು ಬಗೆಹರಿಸದೇ ಹೋದಲ್ಲಿ ಕನ್ಕಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ ತಾಲೂಕಾ ಘಟಕದ ವತಿಯಿಂದ ಪುರಸಭೆ ಕಾರ್ಯಾಲಯ ಘಟಪ್ರಭಾ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯ ವಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ, ಸಂತೋಷ ಅರಳಿಕಟ್ಟಿ ಬಣದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ, ಕನ್ನಡ ಸೇನೆ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಕೆಂಪಯ್ಯ ಪುರಾಣಿಕ, ಕನ್ನಡ ಸೇನೆ ಗೋಕಾಕ ತಾಲೂಕಾಧ್ಯಕ್ಷ ಅಪ್ಪಾಸಾಬ ಮುಲ್ಲಾ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಮಹಾಜನ, ಕನ್ನಡ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಮಾರುತಿ ಚೌಕಶಿ, ಮೂಡಲಗಿ ತಾಲೂಕಾಧ್ಯಕ್ಷ ರಾಘವೇಂದ್ರ ಕುಡ್ಡೆಮ್ಮಿ, ಮಲ್ಲಿಕಾರ್ಜುನ ಅರಭಾವಿ, ಶಶಿಧರ ಚೌಕಶಿ, ರಾಜಕುಮಾರ ಹೊನಕೇರಿ, ನಾಗರಾಜ ಶಹಾಪುರ, ಶಿವರಾಜ ಚಿಗಡೊಳಿ, ನಾರಾಯಣ ಜಡಕಿನ, ವಿಠ್ಠಲ ಬೆಳಗಲಿ, ಕಾಶಪ್ಪ ನಿಂಗನ್ನವರ, ಮಲ್ಲಿಕಾರ್ಜುನ ಶಿಂಧೆ, ಬಸವರಾಜ ಹುಬ್ಬಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ,: ಸದಾನಂದ ಎಂ
