ಕಾಕತಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರ ಸಮೀಪದ ಯಮಕನಮರಡಿ ಮತಕ್ಷೇತ್ರದ ಕಾಕತಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ,ಜನರ ಸುಸಜ್ಜಿತ ವಾಗಿ ಜನರ ಬದುಕು ವಾಗಿರಲು ಜನರ ಸುರಕ್ಷತೆಗಾಗಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಳವಡಿಸಿದ ಸಿಸಿಟಿವಿ ಕ್ಯಾಮರಾಗಳನ್ನು ಚಾಲನೆ ನೀಡಲಾಯಿತು. ನಂತರ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಊರಿನ ಗಣ್ಯಮಾನ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಮುಖಂಡರು ಮತ್ತೀತರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ