ಚಿತ್ತಾಪುರ; ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ನಾರಿಶಕ್ತಿ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣದ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಗೆ ತಳಿರು ತೋರಣಗಳಿಂದ ಸಿಂಗರಿಸಿ, ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಆಚರಿಸಿದರು.
ನಂತರ ಪಂಚ ಗ್ಯಾರಂಟಿ ಸಮಿತಿ ಸದಸ್ಯ ಶರಣು ಡೋಣಗಾಂವ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ನಾರಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ದಾಖಲೆಯ ಸಂಚಾರ, ಇದು ಮಹಿಳೆಯರ ಸ್ವಾವಲಂಬನೆಯ ಕನಸ್ಸಿಗೆ ಕಾಂಗ್ರೆಸ್ ಸರ್ಕಾರ ಶಕ್ತಿ ನೀಡಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಬಸ್ ಘಟಕದ ವ್ಯವಸ್ಥಾಪಕ ಗೊಲ್ಲಾಳಪ್ಪ ಬಿರಾದಾರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್, ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸಪ್ನಾ ಪಾಟೀಲ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ, ಪುರಸಭೆ ಸದಸ್ಯರಾದ ಚಂದ್ರಶೇಖರ್ ಕಾಶಿ, ರಸೂಲ್ ಮುಸ್ತಫಾ, ಶ್ರೀನಿವಾಸರೆಡ್ಡಿ ಪಾಲಪ್, ಸಂತೋಷ ಚೌದರಿ, ಶಿವರಾಜ್ ಪಾಳೇದ್, ಶಿವಕಾಂತ್ ಬೆಣ್ಣೂರಕರ್, ಸಾಬಣ್ಣ ಕಾಶಿ, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ್, ಮಾಜಿ ಅಧ್ಯಕ್ಷ ಸಂಜಯ ಬುಳಕರ್, ಎನ್‌ಎಸ್’ಯುಐ ಅಧ್ಯಕ್ಷ ಭೀಮು ಹೋಳಿಕಟ್ಟಿ, ಅಹಮದ್ ಸೇಟ್, ಮಹ್ಮದ್ ಎಕ್ಬಾಲ್, ಖಾಜಾ ಬಾದಲ್, ಮಲ್ಲಿಕಾರ್ಜುನ ಬೆಣ್ಣೂರಕರ್, ನಿಂಗಾರೆಡ್ಡಿ ಭೀಮನಳ್ಳಿ, ಸುರೇಶ ಗುತ್ತೇದಾರ, ಗಂಗಾಧರ ಡಿಗ್ಗಿ, ವಿಠಲ್ ಕಟ್ಟಿಮನಿ, ರವಿಸಾಗರ ಹೊಸಮನಿ, ವಿನುಕುಮಾರ್ ಜೆಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಪ್ರಯಾಣಿಕರು, ತಾಯಂದಿರು ಹಾಗು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
