ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಸತೀಶ ಜಾರಕಿಹೊಳಿ

ಬೆಳಗಾವಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆಯನ್ನು ಇಂದು ನೆರವೇರಿಸಿದ್ದರು.

ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಜಿಲ್ಲೆಯಲ್ಲಿ ಇನ್ನಷ್ಟು ಬಸ್‌ಗಳನ್ನು ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸೀಫ್ ಸೇಠ್, ಮಹಾಂತೇಶ ಕೌಜಲಗಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

error: Content is protected !!