ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿತ; ತಪ್ಪಿದ ಭಾರಿ ಅನಾಹುತ

ಚಿತ್ತಾಪುರ; ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯಾಗಿದ್ದು, ಯಾವುದೇ ಸಾವು ನೋವು ಆಗಿಲ್ಲ ಎಂದು ತಿಳಿದು ಬಂದಿದೆ.
ಮಹ್ಮದ್ ರಫೀಕ್ ರಸೂಲ್ ಸಾಬ್ ಡೋಂಗಾ ಹಾಗೂ ಪುಥಲಿ ಬೇಗಂ ಹುಸೇನ್ ಸಾಬ್ ಡೋಂಗಾ ಎನ್ನುವವರ ಮನೆಯ ಗೋಡೆ ಕುಸಿದು ಬಿದ್ದಿದೆ.

ನಂತರ ಕರವೇ ದಂಡೋತಿ ಗ್ರಾಮ ಘಟಕ ಅಧ್ಯಕ್ಷ ಮೈನೋದ್ದೀನ್ ಮಾತನಾಡಿ, ಕಳೆದ ಕೆಲವು ದಿನಗಳಿಂದ ಬಿಟ್ಟು ಬೀಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ದಂಡೋತಿ ಗ್ರಾಮದಲ್ಲಿ ನಿನ್ನೆ ರಾತ್ರಿ ಎರಡು ಗಂಟೆ ಸುಮಾರಿಗೆ ಎರಡು ಮನೆಗಳ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿನ ಅಡುಗೆ ಸಾಮಾನು, ಗ್ಯಾಸ್, ಕುಲರ್, ಫ್ರೀಡ್ಜ್, ಟಿ.ವಿ, ತೊಗರಿ ಬೆಳೆ, ಕಡ್ಲಿ ಬೆಳೆ, ಉದ್ದು ಸೇರಿದಂತೆ ಒಟ್ಟು 3 ಲಕ್ಷ ರೂ.ಯಷ್ಟು ಹಾನಿ ಸಂಭವಿಸಿದೆ. ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಮನವಿ ಮಾಡಿದರು

ಸುದ್ದಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

error: Content is protected !!