ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಶಾಸಕ ಲಕ್ಷ್ಮಣ ಸವದಿ

ಅಥಣಿ: ಅಥಣಿ ಸ್ಪೋರ್ಟ್ಸ್ ಅಂಡ್ ಸೋಶಿಯಲ್ ಕ್ಲಬ್ ಮತ್ತು ವಾಯು ವಿಹಾರ ಬಳಗದ ಸಹಯೋಗದಲ್ಲಿ ಕ್ಲಬ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕರಾದ ಲಕ್ಷ್ಮಣ ಸವದಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಅವರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ವಾಗಿದೆ. ದಿನದಿಂದ ದಿನಕ್ಕೆ ಪರಿಸರ ಹಾಳಾಗುತ್ತಿದ್ದು, ನಾವೆಲ್ಲರೂ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ, ಪ್ರತಿಯೊಬ್ಬರೂ ತಮ್ಮ ಮನೆ, ತೋಟ, ರಸ್ತೆ ಪಕ್ಕಗಳಲ್ಲಿ ಗಿಡಗಳನ್ನು ಬೆಳೆಸಬೇಕು. ನಾವು ನೆಟ್ಟ ಗಿಡಗಳು ಬೆಳೆದು ದೊಡ್ಡ ಮರಗಳಾಗಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುತ್ತವೆ. ಸಾರ್ವಜನಿಕರು ಗಿಡಗಳನ್ನು ನೆಡುವ ಮೂಲಕ ಪರಿಸರ ಸಮತೋಲನ ಕಾಪಾಡಲು ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಪೋರ್ಟ್ಸ್ ಅಂಡ್ ಸೋಶಿಯಲ್ ಕ್ಲಬ್ ಅಧ್ಯಕ್ಷ ಶಿವಕುಮಾರ ಸವದಿ, ಸರ್ವ ಸದಸ್ಯರು, ಅಧಿಕಾರಿಗಳು, ಮತ್ತು ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

ವರದಿ : ಭರತೇಶ ನಿಡೋಣಿ ಜೆಕೆ ನ್ಯೂಸ್ ಚಿಕ್ಕೋಡಿ

error: Content is protected !!