ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಮಸ್ಯೆ ಗಳಿಗೆ ಸ್ಪಂದಿಸುತಿಲ್ಲ

ಹುಕ್ಕೇರಿ: ಕಾರ್ಮಿಕ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ತಾಲೂಕಿನ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಮಿನಿವಿಧಾನ ಸೌಧ ಬಳಿ ಜಮಾಯಿಸಿದ ಕಾರ್ಮಿಕರು, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಹುಕ್ಕೇರಿ ಕಾರ್ಮಿಕ ಇಲಾಖೆ ವಿಫಲವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಳಂಬವಾದಲ್ಲಿ ಉಗ್ರ ಹೋರಾಟ ಮಾಡುವುದು ಎಂದು ಎಚ್ಚರಿಸಿದರು.

ಹುಕ್ಕೇರಿ ಕಾರ್ಮಿಕ ಇಲಾಖೆಯ ಸದ್ಯದ ಪ್ರಭಾರಿ ಅಧಿಕಾರಿ ಕಚೇರಿಗೆ ಬರುತ್ತಿಲ್ಲ.

ಹಾಗಾಗಿ ಕೂಡಲೇ ಖಾಯಂ ಅಧಿಕಾರಿಯನ್ನು ನಿಯೋಜಿಸಬೇಕು. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಜನಸ್ಪಂದನ ಸಭೆ ನಡೆಸಬೇಕು ಎಂದು ತಹಸೀಲದಾರರಿಗೆ ಸಲ್ಲಿಸಿದ ಮನವಿಯಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದರು.

ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಕಾರ್ಯಕರ್ತರು ಹುಕ್ಕೇರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಸರ್ಕಾರದ ಕಾರ್ಮಿಕ ಕಿಟ್‌ಗಳನ್ನು ಸರಿಯಾಗಿ ಪೂರೈಸುತ್ತಿಲ್ಲ. ಕಟ್ಟಡ ಕಾರ್ಮಿಕ ಕಾರ್ಡ್‌ ಗಳ ನವೀಕರಣ ಪ್ರಕ್ರಿಯೆಗೆ ವಿನಾಃಕಾರಣ ಕಾಲಹರಣ ಮಾಡುತ್ತಿದ್ದಾರೆ. ಕಾರ್ಮಿಕರ ಯೋಜನೆ ಅನುಷ್ಠಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಿಸಿದ ಆಸ್ಪತ್ರೆಗಳನ್ನು ನಿಖರವಾಗಿ ಸ್ಪಷ್ಟಪಡಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಪಾದಿಸಿದರು.

 

ಘಟಕದ ಅಧ್ಯಕ್ಷ ಸತೀಶ ದಿನ್ನಿಮನಿ, ಶಂಕರ ಕಟ್ಟಿಮನಿ, ಶಶಿಕಾಂತ ಹೊನ್ನೊಳ್ಳಿ, ಶಕೀಲ ಮೋಮಿನದಾದಾ, ಗಜಬರ ಜಮಾದಾರ, ಸಂಜು ನಾಯಿಕ, ಇಮ್ರಾನ ಮೋಮಿನ್, ವಿಠಲ ತಳವಾರ, ಅನಿಲ ತಳವಾರ, ಆಯಾಜ ಕೆರೂರೆ, ಇಬ್ರಾಹಿಮ್ ಮುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

 

ವರದಿ : ಸದಾನಂದ ಎಮ್ ಎಚ್

error: Content is protected !!