ಹುಮನಾಬಾದ್ : ದಾನಗಳಲ್ಲಿ ರಕ್ತದಾನ ಮಹಾದಾನ. ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುಲಷಾನ್ – ಈ – ಉರ್ದು ಅದಬ್ ವೆಲ್ಫರ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ದೇಶಿಸಿ ಮಾತನಾಡಿದರು.
ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಫ್ಸರಮಿಯ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾಳಶಟ್ಟಿ, ತಬ್ರೇಜ್ ಶಮ್ಸ್, ಮಹ್ಮದ್ ಹುಸೇನ್, ಮಹ್ಮದ್ ಅಲಿಯೋದ್ಧಿನ್, ಉಮೇರ್ ಪಾಷಾ, ಮಹ್ಮದ ಮಾಜೀದ್, ಮಹ್ಮದ್ ಸೀರಾಜ್, ಮಹ್ಮದ್ ಅಸ್ವಾ, ಮಹ್ಮದ್ ಸುಲ್ತಾನ್, ಮಹ್ಮದ್ ಮೊಸೀನ್, ಅಜರ್ ಮುಸ್ತಾಫಾ, ಶೇಖ್ ಇಬ್ರಾಹಿಂ, ಮಹ್ಮದ್ ಮೊಸೀನ್, ಎಂಡಿ ಮಜರ್ ಇದ್ದರು.