ರಾಯಬಾಗ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ನಗರದಲ್ಲಿ ಇಂದು ರಾಯಬಾಗ ವಿಧಾನಸಭಾ ಮತಕ್ಷೇತ್ರದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದ ಉದ್ಘಾಟನೆಯನ್ನು ನೆರವೇರಿಸಿದರು.
ಈ ವೇಳೆ ವಿ.ಪ.ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷರು ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಮುಖಂಡರಾದ ಶ್ರೀ ಮಹಾವೀರ ಮೋಹಿತೆ, ಶ್ರೀ ರಾಜೇಶ ಕದಂ, ಶ್ರೀ ಪುಟ್ಟು ಪಾಟೀಲ,ಚಿಕ್ಕೊಡಿ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ವೇಳೆ ವಿಧಾನ ಪರಿಷತ್ತಿನ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 61 ಲಕ್ಷ ರೂ,ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ 9 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾಮೂಹಿಕವಾಗಿ ಚಾಲನೆ ನೀಡಿದರು.
ವರದಿ : ಸದಾನಂದ ಎಂ
