ದೆಹಲಿ : ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಬೆಂಬಲಿಗರು ನವ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ವೋಟ್ ಚೋರಿ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ, ನಮ್ಮ ಕರ್ನಾಟಕ ರಾಜ್ಯ ಬೆಳಗಾವಿಯ ಕಾಂಗ್ರೆಸ್‌ನ ಕಾರ್ಯಕರ್ತರು ಹಾಗೂ ಮುಖಂಡರು ಮಹಿಳಾ ಕಾರ್ಯಕರ್ತರು ಅತ್ಯಧಿಕ ಸಂಖ್ಯೆಯಲ್ಲಿ ಉತ್ಸಾಹಭರಿತವಾಗಿ ಭಾಗವಹಿಸಿದರು.
ಈ ಜನಾಂದೋಲನದ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವುದು, ಮತದಾರರ ಹಕ್ಕುಗಳ ಮೇಲಿನ ದಾಳಿಯನ್ನು ಖಂಡಿಸುವುದು ಎಂಬ ಸ್ಪಷ್ಟ ಸಂದೇಶ ದೇಶದಾದ್ಯಂತ ಪ್ರತಿಧ್ವನಿಸಿತು. ವೋಟ್ ಚೋರಿ ವಿರುದ್ಧದ ಈ ಪ್ರತಿಭಟನೆಗೆ ದೇಶದ ವಿವಿಧ ಭಾಗಗಳಿಂದ ಅಪಾರ ಜನಮಂಡನೆ ಸಿಕ್ಕಿದ್ದು, ಜನರ ಅಸಮಾಧಾನ ಮತ್ತು ಆಕ್ರೋಶ ಸ್ಪಷ್ಟವಾಗಿ ವ್ಯಕ್ತವಾಯಿತು.
ಸತ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವ ಈ ಹೋರಾಟದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಮುಂಚೂಣಿಯಲ್ಲಿ ನಿಂತು, ಪ್ರಜಾಪ್ರಭುತ್ವದ ರಕ್ಷಣೆಗೆ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿತು.
ವರದಿ : ಸದಾನಂದ ಎಂ
