ಹುಮನಾಬಾದ : ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾಗಿರುವ ಭಾನುವಾರ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮುಖಾಂತರ ಸತೀಶ್ ರತ್ನಾಕರ್ ಚಾಲನೆ ನೀಡಿದರು.
ಗ್ರಾಮದ ವಾರ್ಡ್ ನಂ 07ರ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮ ಪಂಚಾಯತ್ ಸದಸ್ಯ ದಲಿತ ಮುಖಂಡ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.
ಈ ವೇಳೆ ಮಾತನಾಡಿದ ಅವರು ಪಲ್ಸ್ ಪೋಲಿಯೋ ಮಾರಕ ರೋಗದಿಂದ ಮಕ್ಕಳಿಗೆ ರಕ್ಷಣೆ ನೀಡಲು ಹಾಕುವ ಒಂದು ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯಾಗಿದ್ದು ಇದು ಮಕ್ಕಳ ರೋಗಗಳ ರಕ್ಷಾ ಕವಚ ವಾಗಿದೆ ತಪ್ಪದೆ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಬೇಕು ಎಂದರು.
