ಚಿಟಗುಪ್ಪಾ : ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಹತ್ತಿರದ ಸಾಯಿ ಅಚಲ್ ಫಂಕ್ಷನ್ ಹಾಲ್‌ನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ವತಿಯಿಂದ ಮಾಜಿ ಸಚಿವರಾದ ರಾಜಶೇಖರ ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಡಿಸೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಫ್ಸರಮಿಯ ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಚಂದ್ರಶೇಖರ ಬಿ. ಪಾಟೀಲ್ ಹಾಗೂ ಭೀಮರಾವ ಬಿ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ತ ಸಮಯಕ್ಕೆ ಹಾಜರಾಗಿ ಸಮಾವೇಶ ಯಶಸ್ವಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
