ಯಮಕನಮರಡಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಜಿಲ್ಲಾ ಪಂ ವ್ಯಾಪ್ತಯ ಕಲಖಾಂಬ ಗ್ರಾಮದಲ್ಲಿ ಶ್ರೀ ಗಣೇಶ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು.
ಸಹಕಾರಿ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಇಂತಹ ಸೊಸೈಟಿಗಳ ಮೂಲಕ ರೈತರು, ಕಾರ್ಮಿಕರು ಹಾಗೂ ಸಾಮಾನ್ಯ ಜನರಿಗೆ ಆರ್ಥಿಕ ಸಬಲತೆ ದೊರೆಯುತ್ತದೆ ಎಂದು ಹೇಳಿದರು. ಸರ್ಕಾರವು ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಸದಾ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅವರ ಆಪ್ತ ಸಹಾಯಕರಾದ ಅರವೀಂದ ಅಣ್ಣಾ ಕಾರ್ಚಿ. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
