ಸಾಮಾಜಿಕ ಜಾಲತಾಣದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಾಗೂ ನಕಲಿ ಧ್ವನಿ ಕ್ಲಿಪ್ ಅನ್ನು ಅಪ್‌ ಲೋಡ್ ಮಾಡಿ ಅಪಪ್ರಚಾರ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

ಬೆಂಗಳೂರು :
ಡಿ.ಬಿ ನಟೇಶ್ ಕೆಎಎಸ್ ಹಿರಿಯ ಅಧಿಕಾರಿ ಹಾಗೂ ಈ ಹಿಂದೆ MUDA ಆಯುಕ್ತರು ನೀಡಿದ ದೂರಿನ ಮೇರೆಗೆ, ಮೈಸೂರು ನಿವಾಸಿ ಸ್ನೇಹಮಯಿ ಕೃಷ್ಣ ಎಂಬವರು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ದೂರದಾರರ ಫೋಟೋ ಹಾಗೂ ನಕಲಿ ದಾಖಲೆಗಳನ್ನು ಹಾಗೂ ಧ್ವನಿ ಕ್ಲಿಪ್ ಅನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿ ದೂರದಾರರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿರುವ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಿನಾಂಕ:18.02.2026 ರಂದು ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದೆ.

ತನಿಖೆ ವೇಳೆ ತನಿಖಾಧಿಕಾರಿಗಳು ದೂರದಾರರಿಂದ ಹಾಗೂ ಸಾಮಾಜಿಕ ಜಾಲತಾಣದಿಂದ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಫೇಸ್‌ಬುಕ್‌ನಲ್ಲಿ ಅಪ್‌ ಲೋಡ್ ಮಾಡಿದ್ದ ಧ್ವನಿ ಕ್ಲಿಪ್ ಕುರಿತು ತನಿಖೆ ನಡೆಸಿದ್ದಾರೆ.

ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಆರೋಪಿಯ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳ ಶೋಧ ಕಾರ್ಯ ನಡೆಸಲಾಗಿದೆ. ಇದಲ್ಲದೆ, ಈ ಪ್ರಕರಣದ ಆರೋಪಿ ಸ್ನೇಹಮಯಿ ಕೃಷ್ಣ ಮೈಸೂರು ಅವರಿಗೆ ನೋಟಿಸ್ ಜಾರಿ ಮಾಡಿ ಆರೋಪಿಯನ್ನು ಠಾಣೆಗೆ ಹಾಜರುಪಡಿಸಿ ವಿಚಾರಣೆ ನಡೆಸಲಾಗುತ್ತಿದೆ.

ವರದಿ : ಮುಬಾರಕ್ ಬೆಂಗಳೂರು

error: Content is protected !!