ಗ್ಯಾಸ್ ಅಭಾವ; ಬೀದರ್‌ನ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

ಬೀದರ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿದೆ. ಇದರ ಮಧ್ಯೆ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗೋರ್ಟಾ(ಬಿ) ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6 ಸಿಲಿಂಡರ್‌ಗಳು ಕಳ್ಳತನವಾಗಿದೆ.

ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು ಗ್ಯಾಸ್ ತುಂಬಿದ್ದ 6 ಸಿಲಿಂಡರ್‌ಗಳನ್ನು ಕಳ್ಳತನ ಮಾಡಿ, ಖದೀಮರು ಪರಾರಿಯಾಗಿದ್ದಾರೆ

ಇಂದು (ಮಾ.23) ಶಿಕ್ಷಕರು ಶಾಲೆಗೆ ಬಂದಾಗ ಅಡುಗೆ ಕೋಣೆಯ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಒಳಗೆ ಹೋಗಿ ನೋಡಿದಾಗ ಸಿಲಿಂಡರ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆಗಾಗಿ ತಂದಿದ್ದ ಗ್ಯಾಸ್ ಸಿಲಿಂಡರ್‌ಗಳೇ ಕಳ್ಳತನವಾಗಿದ್ದು, ಸದ್ಯ ಮಕ್ಕಳಿಗೆ ಬಿಸಿಯೂಟ ತಯಾರಿಸಲು ತೊಂದರೆಯುಂಟಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

error: Content is protected !!