ಯುವತಿ ಕೊಲೆ ಉನ್ನತ ಮಟ್ಟದ ತನಿಖೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮಹಿಳಾ ಮೋರ್ಚಾ ಎಸ್ಟಿ ಮೋರ್ಚಾ ಪ್ರತಿಭಟನೆ

ವರದಿ..ಬೀದರ್ 

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥ ವಾಡಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ ಮೂಲತಃ ಬಸವಕಲ್ಯಾಣ ತಾಲ್ಲೂಕಿನ ಗುಂಡೂರ ಗ್ರಾಮದ ಭಾಗ್ಯಶ್ರೀ

 

(18) ಕೊಲೆಯಾದ ಯುವತಿ ಈಕೆಯ ಪಾಲಕರು ಕಳೆದ ಕೆಲ ವರ್ಷಗಳಿಂದ ಗುಣತೀರ್ಥ ವಾಡಿ ಗ್ರಾಮದಲ್ಲಿ ಉಳಿದು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತ ಇಲ್ಲೆ ನೆಲೆಸಿದ್ದಾರೆ.

 

ಕಳೆದ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಈಕೆ ಮನೆಯಿಂದ ನಾಪತ್ತೆಯಾಗಿದ್ದು,

 

ಭಾನುವಾರ ಬೆಳಿಗ್ಗೆ 11ರ ಸುಮಾರಿಗೆ ಗ್ರಾಮದ ಸರ್ಕಾರಿ ಶಾಲೆ ಪಕ್ಷದ ಮುಳ್ಳಿನ ಪೋದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಯುವತಿ ಶವ ಬಹುತೇಕ ವಿಸ್ಕ್ರತವಾಗಿದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ತಲೆ ನೇರಿದಂತ ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದು ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

 

ಆ ಹೆಣ್ಣುಮಗುವಿನ ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ. ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ.

 

ಈ ಘಟನೆಯಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ.

ರಾಜ್ಯಾಧ್ಯಂತ ಈ ರೀತಿಯ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು.ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು.

 

ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು ಪೊಲೀಸರು ಕೂಡಲೇ ಅಪರಾಧಿಯನ್ನು ಉಗ್ರ ಶಿಕ್ಷೆ ಆಗುವ ಹಾಗೆ ಸೂಕ್ತ ತನಿಖೆಯನ್ನು.

 

ಕೈಗೊಂಡ ಆ ಹೆಣ್ಣುಮಗುವಿನ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಆಗ್ರಹಿಸುತ್ತದೆ. ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಯಿ ಶರಣೆ ಶಂಕುತಲಾ ಬೆಲ್ದಾಳೆ. ನಗರ ಸಭೆ ಸದಸ್ಯೆ ಉಲ್ಲಾಸಿನಿ ವಿಕ್ರಂ ಮುದ್ದಾಳೆ, ಯೊಗೆಶ್ವರಿ ಸೊನಕಾಂಬಳೆ. ಹೆಮಾ ತುಕ್ಕಾ ರೆಡ್ಡಿ. ಮತ್ತು ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಹೆಣ್ಣು ಮಕ್ಕಳು ಭಾಗವಹಿಸಿದ್ದರು.