ಅವರು ಶನಿವಾರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ಏಪ್ರಿಲ್ 11ರಂದು ಆರಂಭವಾದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಜನವಾಡ ರಸ್ತೆಯಲ್ಲಿನ ಝೀರಾ ಕನ್ವೆನ್ಸನ್ ಹಾಲನಲ್ಲಿ ಆಯೋಜನೆಯಾಗಿದ್ದ ಸಮಾರಂಭದಲ್ಲಿ, ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಸಂತ?ದಿಂದ ಉದ್ಘಾಟಿಸಿದ್ದೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಪತ್ರಕರ್ತರು ಸಮಾಜ ತಿದ್ದುವ, ಜನತೆಯನ್ನು ಜಾಗೃತಗೊಳಿಸುವ ಕಾರ್ಯ ಮಾಡಬೇಕು. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು ಎಂದು ಒತ್ತಿ ಹೇಳಿದರು.
ನಮ್ಮ ಸಮಾಜದಲ್ಲಿ ಅನೇಕ ಜಾತಿಗಳು, ಧರ್ಮಗಳು, ಭಾಷೆಗಳಿವೆ. ಹಲವು ಸಂಸ್ಕೃತಿ ಇದೆ. ಇಂತಹ ಸಮಾಜದಲ್ಲಿ ನಾವು ಬದುಕಿದ್ದೇವೆ ಎಂಬುದನ್ನು ಅರಿತು ಎಲ್ಲರೂ ಒಪ್ಪುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದರು ಎಂದು ತಿಳಿಸಿದ ಮುಖ್ಯಮಂತ್ರಿಗಳು, ನಮ್ಮ ಸಂವಿಧಾನದ ಆಶಯಗಳು ಸಮಾಜದಲ್ಲಿ ಜಾರಿಯಾಗುತ್ತಿದೆಯಾ ಎಂದು ನೋಡುವ, ತಿಳಿಯುವ ಕಾರ್ಯವನ್ನು ಪತ್ರಕರ್ತರು ಮಾಡಬೇಕು ಎಂದರು.
ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ ಅವರು ಸಹ ಪತ್ರಕರ್ತರಾಗಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯ, ಪಡೆಯುವುದೇ ಅವರ ಮುಖ್ಯ ಉದ್ದೇಶವಾಗಿತ್ತು. ಅದಕ್ಕಾಗಿ ಗಾಂಧೀಜಿ, ಅಂಬೇಡ್ಕರ ಅವರು ಪತ್ರಿಕೆಯನ್ನು ಹೊರಡಿಸಿ ದಮನಿತರ ಧ್ವನಿಯಾಗಿ ಕೆಲಸ ಮಾಡಿದರು. ಇಂದಿನ ಪತ್ರಕರ್ತರು ಗಾಂಧೀಜಿಯವರ, ಅಂಬೇಡ್ಕರ ಅವರ ಆಶಯಗಳನ್ನು ಅರಿತು ಅವರಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಈಶ್ವರ ಖಂಡ್ರೆ ಮಾತನಾಡಿ, ಸ್ವಾತಂತ್ರ್ಯ ಪೂರ್ವದಿಂದ ಹಿಡಿದು ಸಮಾಜದ ಪ್ರಗತಿಯಲ್ಲಿ ಮಾಧ್ಯಮಗಳ ಪಾತ್ರ ಬಹಳ ಮಹತ್ವದಾಗಿದೆ. ಶಾಸಕಾಂಗ, ಕಾಯಾರ್ಂಗ ಮತ್ತು ನ್ಯಾಯಾಂಗಗಳು ದಾರಿ ತಪ್ಪಿದಾಗ ಜನಭಿಪ್ರಾಯ ಸಂಗ್ರಹಿಸುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಕೆಲಸವನ್ನು ಮಾಧ್ಯಮ ಮಾಡುತ್ತದೆ ಎಂದರು
ಈ ಸಂದರ್ಭದಲ್ಲಿ ಹಾರಕೂಡ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ,
ನಾಡೋಜ ಡಾ. ಬಸವಲಿಂಗ
ಪಟ್ಟದ್ದೇವರು,
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶಪಾಟೀಲ,
ಲೋಕಸಭಾ ಸಂಸದ ಸಾಗರ ಖಂಡ್ರೆ,
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದಕೆ.ವಿ.ಪ್ರಭಾಕರ, ಶಾಸಕ ಶರಣು ಸಲಗರ, ವಿಧಾನ ಪರಿಷತ್ಸದಸ್ಯರಾದ ಡಾ.ಚಂದ್ರಶೇಖರಪಾಟೀಲ
ಭೀಮರಾವ್ ಪಾಟೀಲ ,
ಮಾಜಿ ಸಚಿವ ರಾಜಶೇಖರ ಪಾಟೀಲ, ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್, ಗಣ್ಯರಾದ ಸರ್ದಾರ ಬಲಬೀರ್ ಸಿಂಗ್,ಗುರುನಾಥ ಕೊಳ್ಳೂರ, ಹಿರಿಯ ಸಂಪಾದಕ ವಿಶ್ವೇಶ್ವರ ಭಟ್,ರಾಜ್ಯ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಮುಖಂಡರಾದ ಸೋಮಣ್ಣ ಬೇವಿನಮರದ, ಬಸವರಾಜ ಜಾಬಶೆಟ್ಟಿ,ಮೇಯರ್ ಗೌಸುದ್ದೀನ್, ಮಲ್ಲಿಕಾರ್ಜುನ ಬಿರಾದಾರ,ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪತ್ರಕರ್ತರು, ಸಂಪಾದಕರು, ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪತ್ರಕರ್ತರು ಸೇರಿದಂತೆ ಇದ್ದರು.
ವರದಿ : ರಾಚಯ್ಯ ಸ್ವಾಮೀ
