ಲೈನ್ ಮ್ಯಾನ್ ಯುವಕನ ಸಾವು

ಬಸವನಬಾಗೇವಾಡಿ ತಾಲ್ಲೂಕಿನ ಹೆಗ್ಗಿಹಾಳ ತಾಂಡಾದಲ್ಲಿ ಕರೆಂಟ್ ಸಮಸ್ಯೆ ಸರಿಪಡಿಸುವ ವೇಳೆ ವೈರ್‌ಮನ್ ಶ್ರೀಧರ್ ಲಮಾಣಿ ಅವರಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ ಅಪ್ಪಿದ್ದಾರೆ ಎಂದು . ಮೃತಪಟ್ಟ ಯುವಕನ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಳಿಕ ಸ್ಥಳದಲ್ಲಿ ಆತಂಕ ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.

ಲಭ್ಯವಾದ ಮಾಹಿತಿಯ ಪ್ರಕಾರ, ಹೆಗ್ಗಿಹಾಳ ತಾಂಡಾದಲ್ಲಿ ವಿದ್ಯುತ್ ಸಮಸ್ಯೆ ಉಂಟಾದ ಹಿನ್ನೆಲೆ ವೈರ್‌ಮನ್ ಶ್ರೀಧರ್ ಲಮಾಣಿ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಶಾಕ್ ತಗುಲಿ ಅವರು ಟಿಸಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಂತರ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು KEB ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. LC ನೀಡಿದ್ದರೂ ಸಹ ವಿದ್ಯುತ್ ಹರಿದಿರುವುದೇ ಈ ದುರ್ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಈ ಆರೋಪಗಳ ಕುರಿತು ಇನ್ನೂ ಅಧಿಕೃತ ದೃಢೀಕರಣ ಹೊರಬಂದಿಲ್ಲ.

ವಿದ್ಯುತ್ ಶಾಕ್ ತಗುಲಿದ ಬಳಿಕ ಶ್ರೀಧರ್ ಲಮಾಣಿ ಅವರನ್ನು ತಕ್ಷಣ ಮನಗೂಳಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹಲವು ಗಂಟೆಗಳು ಕಳೆದರೂ ಯಾವುದೇ ವೈದ್ಯರು ಅಥವಾ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ನಮ್ಮ ಮಾಧ್ಯಮದೊಂದಿಗೆ ಮಾತನಾಡಿದ KEB ಅಧಿಕಾರಿಗಳು, ಘಟನೆ ಕುರಿತು ಮಾಹಿತಿ ನೀಡಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚಲು ಇಲಾಖೆಯಿಂದ ಪರಿಶೀಲನೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಮೃತ ಶ್ರೀಧರ್ ಲಮಾಣಿ ಕುಟುಂಬದವರು ನಮ್ಮ ಮಾಧ್ಯಮದೊಂದಿಗೆ ಮಾತನಾಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಈ ಘಟನೆಯಲ್ಲಿ ಯಾರಾದರೂ ನಿರ್ಲಕ್ಷ್ಯ ಅಥವಾ ಸಂಚು ಇದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಸ್ತುತ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ತನಿಖೆಯಲ್ಲಿ ತೊಡಗಿಕೊಂಡಿದ್ದಾರೆ. ಈ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ದುಃಖದ ವಾತಾವರಣ ನಿರ್ಮಾಣ ಮಾಡಿದೆ.

ವರದಿ : ಮಹಿಬೂಬ್ ಗುಂಠಕಲ್

error: Content is protected !!