ಹುಕ್ಕೇರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಹೊಸದಾಗಿ ಅಂಗನವಾಡಿ ಕಂ.ಕೃಚ್ ಕೇಂದ್ರಗಳಿಗೆ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸುವ ಬಗ್ಗೆ.
ಹುಕ್ಕೇರಿ ತಾಲ್ಲೂಕು, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 05 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ದಿನಾಂಕ:14.05.2026 ರಿಂದ 30.05.2026 ರ ಸಂಜೆ 5.30 ಗಂಟೆಯೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಹುಕ್ಕೇರಿ ತಾಲ್ಲೂಕು, ಈ ಕಛೇರಿಗೆ ಖುದ್ದಾಗಿ ಅಥವಾ ಅಂತಿಮ ದಿನಾಂಕ ಮತ್ತು ಸಮಯದೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ತಲುಪುವಂತೆ ನೊಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹುಕ್ಕೇರಿ ತಾಲ್ಲೂಕು ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿರುತ್ತದೆ. ದೂರವಾಣಿ ಸಂಖ್ಯೆ: 08333-265099
ಮೇಲ್ಕಂಡ ಪ್ರಕಟಣೆಯನ್ನು ಜಿಲ್ಲಾ ಮಟ್ಟದ ಹಾಗೂ ಸ್ಥಳೀಯ ದಿನಪತ್ರಿಕೆಗಳಲ್ಲಿ ಉಚಿತವಾಗಿ ಪ್ರಕಟಿಸಿ, ವ್ಯಾಪಕ ಪ್ರಚಾರ ಮಾಡುವಂತೆ ತಮ್ಮಲ್ಲಿ ಕೋರಲಾಗಿದೆ.
ವರದಿ : ಸದಾನಂದ ಎಮ್
