ನಾವು ಪರಿಸರ ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ಮರೆಯಬಾರದು : ದೇವಿಂದ್ರ ಅರಣಕಲ್

ಚಿತ್ತಾಪುರ: ನಾವು ಪರಿಸರ ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ಮರೆಯಬಾರದು. ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದರು.

ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ವತಿಯಿಂದ ಸೋಮವಾರ ಕಚೇರಿ ಹತ್ತಿರ ಹಮ್ಮಿಕೊಂಡಿದ್ದ ಕೇಂದ್ರ ಸಹಕಾರ ಸಚಿವಾಲಯ 5 ವರ್ಷ ಪೂರೈಸುತ್ತಿರುವ ನಿಮಿತ್ತ ಸಹಕಾರ ಸಪ್ತಾಹ ಆಚರಣೆ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಸಪ್ತಾಹದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿ ಇಲಾಖೆ ಅಧಿಕಾರ ಸಂಜೀವಕುಮಾರ ಮಾನಕಾರ್ ಮಾತನಾಡಿದರು.

error: Content is protected !!