ಭಾಲ್ಕಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕರೆ ಮೇರೆಗೆ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಹಿನ್ನೆಲೆಯಲ್ಲಿ ಭಾಲ್ಕಿಯಲ್ಲಿ ಸೆಪ್ಟೆಂಬರ್ 3 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ.
ಈ ಕುರಿತು ಭಾಲ್ಕಿ ಮಂಡಲ ಅಧ್ಯಕ್ಷ ವೀರಣ್ಣ ಕಾರಬಾರಿ ಪ್ರಕಟಣೆ ನೀಡಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ, ಬಡವರ ಹಾಗೂ ದಲಿತ ವಿರೋಧಿ ಮತ್ತು ಭ್ರಷ್ಟ ಸರ್ಕಾರವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ವತಿಯಿಂದ ಬಳ್ಳಾರಿ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ದಿನಾಂಕ 03/09/2026 ರಂದು ನಡೆಯುವ ಈ ಹೋರಾಟದಲ್ಲಿ ಬೀದರ್ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಬೇಕೆಂದು ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ.
ಆದ್ದರಿಂದ ಭಾಲ್ಕಿ ಮಂಡಲದ ವತಿಯಿಂದ ಸೆ.3 ರಂದು ಭಾಲ್ಕಿ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ. ಎಲ್ಲರೂ ಸಹಕರಿಸಬೇಕೆಂದು ಅವರು ವಿನಂತಿಸಿದ್ದಾರೆ.
