ದೆಹಲಿಯಲ್ಲಿ ದಲಿತ-ಆದಿವಾಸಿ ಸ್ವಾಭಿಮಾನ ಸಮಾವೇಶ

ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದ ಮಾವಲಂಕರ್ ಹಾಲ್‌ನಲ್ಲಿ ಇಂದು ಕಾಂಗ್ರೆಸ್ SC/ST ಸಂಸದರ ವೇದಿಕೆ ಆಯೋಜಿಸಿದ್ದ ದಲಿತ-ಆದಿವಾಸಿ ಸ್ವಾಭಿಮಾನ ಸಮಾವೇಶ ನಡೆಯಿತು.

ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಆದಿವಾಸಿ ಕಾಂಗ್ರೆಸ್ ರಾಷ್ಟ್ರೀಯ ಸಂಚಾಲಕ ಶೋಭನ್ ಬಾಬು ಭುಕ್ಕಾ ಅವರ ಉಪಸ್ಥಿತಿಯಲ್ಲಿ ದಲಿತರು ಮತ್ತು ಆದಿವಾಸಿಗಳ ಗೌರವ, ಹಕ್ಕುಗಳು ಹಾಗೂ ಸಂವಿಧಾನಾತ್ಮಕ ರಕ್ಷಣೆಯ ಕುರಿತು ಚರ್ಚಿಸಲಾಯಿತು.

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ನಂತರ ನಡೆದ ಶುದ್ಧೀಕರಣ ಘಟನೆಯನ್ನು ಸಮಾವೇಶದಲ್ಲಿ ಸರ್ವಾನುಮತದಿಂದ ಖಂಡಿಸಲಾಯಿತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಯಿತು.

ಜೊತೆಗೆ ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ 45 ಆದಿವಾಸಿ ಮಕ್ಕಳ ಸಾವಿನ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿ, ಸಮಯಬದ್ಧ ತನಿಖೆಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ ಸೇರಿದಂತೆ ವಿವಿಧ ರಾಜ್ಯಗಳ ಗಣ್ಯರು ಮತ್ತು ಸಂಸದರು ಉಪಸ್ಥಿತರಿದ್ದರು.

error: Content is protected !!