ಗೋಡಚಿ ಕ್ಷೇತ್ರದ ಜನಸೇವೆಗೆ ಮತ್ತೊಮ್ಮೆ ಅವಕಾಶ ಕೋರುತ್ತೇನೆ: ಜಹೂರ್.ಆರ್ ಹಾಜಿ

ಮೀಸಲಾತಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ | ಜನರ ಪ್ರೀತಿ, ವಿಶ್ವಾಸವೇ ನನ್ನ ಶಕ್ತಿ ಎಂದ ಮಾಜಿ ಸದಸ್ಯ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಡಚಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಹಿಂದುಳಿದ ವರ್ಗ (ಅ) ಕ್ಕೆ ಮೀಸಲಾಗಿರುವ ಹಿನ್ನೆಲೆಯಲ್ಲಿ, ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಬೆಂಬಲವನ್ನು ಕೋರಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜಹೂರ್ ಆರ್. ಹಾಜಿ ಮನವಿ ಮಾಡಿದ್ದಾರೆ.

ಕ್ಷೇತ್ರದ ಜನರೊಂದಿಗೆ ಹಲವು ವರ್ಷಗಳಿಂದ ಆತ್ಮೀಯ ಸಂಬಂಧ ಹೊಂದಿದ್ದು, ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತಾ ಜನಸೇವೆಯ ಹಾದಿಯಲ್ಲಿ ಸಾಗಿದ್ದೇನೆ. ಜನರ ಸಮಸ್ಯೆಗಳನ್ನು ಆಲಿಸಿ, ಅವರ ಆಶಯಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದು ತಮ್ಮ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜನರ ವಿಶ್ವಾಸವೇ ನನ್ನ ಶಕ್ತಿ, ಜನಸೇವೆಯೇ ನನ್ನ ಸಂಕಲ್ಪ

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ತಮ್ಮ ಮೇಲಿರಲಿ ಎಂದು ಜಹೂರ್ ಆರ್. ಹಾಜಿ ಮನವಿ ಮಾಡಿದ್ದಾರೆ. ಜನರೊಂದಿಗೆ ಬೆರೆತು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಮತ್ತೊಮ್ಮೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ.

ಗೋಡಚಿ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನರ ಆಶಯಗಳಿಗೆ ಸ್ಪಂದನೆ ಹಾಗೂ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ದುಡಿಯುವ ಸಂಕಲ್ಪ ಹೊಂದಿರುವುದಾಗಿ ಅವರು ಹೇಳಿದ್ದಾರೆ.

ಜನರು ನೀಡುವ ಪ್ರೀತಿ ಮತ್ತು ವಿಶ್ವಾಸಕ್ಕೆ ಎಂದಿಗೂ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿರುವ ಜಹೂರ್ ಆರ್. ಹಾಜಿ, “ನಿಮ್ಮ ಆಶೀರ್ವಾದವೇ ನನ್ನ ಬಲ, ನಿಮ್ಮ ಪ್ರೀತಿಯೇ ನನ್ನ ಬೆಂಬಲ, ಜನಸೇವೆಯೇ ನನ್ನ ಸಂಕಲ್ಪ. ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ” ಎಂದು ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ವರದಿ : ಎಂ.ಡಿ ಸೋಹೆಲ್ ಬೈರಾಕದಾರ್

error: Content is protected !!