ಗೋಕಾಕ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗೋಕಾಕ ನಗರದ ಚನ್ನಮ್ಮ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಕನ್ನಡ ರಕ್ಷಣಾ ವೇದಿಕೆ ಹಾಗೂ ಕನ್ನಡ ಸೇನೆ ಸಂಘಟನೆಗಳು ಬೆಂಬಲ ಸೂಚಿಸಿದವು.
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ಹಕ್ಕುಗಳು ಹಾಗೂ ನ್ಯಾಯಯುತ ಬೇಡಿಕೆಗಳಿಗಾಗಿ ನಡೆಯುವ ಹೋರಾಟಗಳಿಗೆ ಕನ್ನಡಪರ ಸಂಘಟನೆಗಳು ಸದಾ ಬೆಂಬಲವಾಗಿ ನಿಲ್ಲಲಿವೆ ಎಂದು ಪದಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಡಾ. ಕೆಂಪಣ್ಣ ಚೌಕಶಿ, ಕನ್ನಡ ಸೇನೆ ಕರ್ನಾಟಕದ ಗೋಕಾಕ ತಾಲೂಕಾಧ್ಯಕ್ಷ ಅಪ್ಪಾಸಾಬ್ ಮುಲ್ಲಾ, ಕರವೇ ರಾಜ್ಯ ಉಸ್ತುವಾರಿ ಅಧ್ಯಕ್ಷ ತಮ್ಮಣ್ಣ ಅರಭಾವಿ, ಕರವೇ ಮೂಡಲಗಿ ತಾಲೂಕು ಉಪಾಧ್ಯಕ್ಷ ಸುರೇಶ್ ಚಿಗಡೊಳ್ಳಿ, ಕರವೇ ಘಟಪ್ರಭಾ ನಗರ ಘಟಕದ ಅಧ್ಯಕ್ಷ ಯಲ್ಲಪ್ಪ ಅಟ್ಟಿಮಿಟ್ಟಿ, ಕರವೇ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಶಿಧರ್ ಚೌಕಶಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದು, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
