ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆಂಪಣ್ಣ ಶಿರಹಟ್ಟಿ ಅರ್ಜಿ ಸಲ್ಲಿಕೆ

ಹುಕ್ಕೇರಿ: ಕಾಂಗ್ರೆಸ್ ಪಕ್ಷದ ಸಂಘಟನಾ ಸೃಜನ್ ಅಭಿಯಾನ 2.0ರಡಿ ಹುಕ್ಕೇರಿ ಮತ್ತು ಸಂಕೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ಪಟ್ಟಣದಲ್ಲಿ ವಿಶೇಷ ಸಭೆ ನಡೆಯಿತು.

ಸಭೆಯಲ್ಲಿ ಬ್ಲಾಕ್ ಸಮಿತಿಗಳ ಬಲವರ್ಧನೆ, ಪಕ್ಷದ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಯಿತು.

ಅದರಂತೆ, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಗುಡಸ ಗ್ರಾಮದ ಕೆಂಪಣ್ಣ ನಾಗಪ್ಪ ಶಿರಹಟ್ಟಿ ಅವರು ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಭೆಯ ವೀಕ್ಷಕರಾಗಿ ಆಗಮಿಸಿದ್ದ ಲಕ್ಷ್ಮಣರಾವ್ ಚಿಂಗೆ, ವಿನಯ್ ನಾವಲಗಟ್ಟಿ, ಸುನೀಲ್ ಹನುಮಂತ್ ನಾವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!