ಚಿಕ್ಕೋಡಿ ಬಸವ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ – ವಾಹನ ಸವಾರರಿಗೆ ನಿರಾಳ

ಚಿಕ್ಕೋಡಿ: ಚಿಕ್ಕೋಡಿ ಪಟ್ಟಣದ ಸಂಚಾರ ವ್ಯವಸ್ಥೆ ಸುಧಾರಣೆಗೆ ಮಹತ್ವದ ಹೆಜ್ಜೆ ಇಡಲಾಗಿದೆ.

ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಅಣ್ಣಾ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಅಣ್ಣಾ ಹುಕ್ಕೇರಿ ಅವರ ಪ್ರಯತ್ನದಿಂದ ಮಂಜೂರಾದ ಅನುದಾನದಲ್ಲಿ ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿ ನೂತನ ಟ್ರಾಫಿಕ್ ಸಿಗ್ನಲ್
ಅಳವಡಿಸಲಾಗಿದೆ.

ವಾಹನ ದಟ್ಟಣೆ ಹೆಚ್ಚಿರುವ ಬಸವ ವೃತ್ತದಲ್ಲಿ ಈ ಹಿಂದೆ ಸಂಚಾರ ಅಸ್ತವ್ಯಸ್ತಗೊಳ್ಳುತ್ತಿತ್ತು. ಇದೀಗ ಸಿಗ್ನಲ್ ಅಳವಡಿಕೆಯಿಂದ ವಾಹನ ದಟ್ಟಣೆಯನ್ನು ನಿಯಂತ್ರಿಸಿ, ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಿದಂತಾಗಿದೆ. ಟ್ರಾಫಿಕ್ ಪೊಲೀಸರ ಕಾರ್ಯಕ್ಕೂ ಅನುಕೂಲವಾಗಿದೆ.

ಜನರ ಅಗತ್ಯಗಳಿಗೆ ಸ್ಪಂದಿಸುತ್ತಾ, ಕ್ಷೇತ್ರದ ಅಭಿವೃದ್ಧಿ ಮತ್ತು ಜನಸೇವೆಯ ಪಯಣ ನಿರಂತರವಾಗಿ ಸಾಗುತ್ತಿದೆ ಎಂದು ಹುಕ್ಕೇರಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

error: Content is protected !!