ಮಂಗಳೂರು : ಟೌನ್ ಹಾಲ್ನಲ್ಲಿ 12 ದಿನಗಳ ಸಂಗೀತ ಯಜ್ಞ; ಗೋವಾ ಸಿಎಂ ಪ್ರಮೋದ್ ಸಾವಂತ್, ಐವನ್ ಡಿ’ಸೋಜಾ, ಬಿಷಪ್ ಪೀಟರ್ ಪೌಲ್ ಸಲ್ಡಾನ್ಹಾ ಭಾಗಿ
ನಗರದ ಟೌನ್ ಹಾಲ್ನಲ್ಲಿ ಸೋಮವಾರ ಬೆಳಿಗ್ಗೆ 5 ಗಂಟೆಗೆ ವಿಶ್ವದ ಪ್ರಥಮ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಮಂಡ್ ಸೊಭಾಣ್ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ಈ ಮಹಾಸಮ್ಮೇಳನವನ್ನು ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಮಹಾಸಮ್ಮೇಳನದಲ್ಲಿ 6,789ಕ್ಕೂ ಹೆಚ್ಚು ಗಾಯಕರು, 250ಕ್ಕೂ ಅಧಿಕ ಸಂಗೀತ ನಿರ್ದೇಶಕರಿಂದ 4,500ಕ್ಕೂ ಹೆಚ್ಚು ಕೊಂಕಣಿ ಹಾಡುಗಳನ್ನು ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ಕಾಲ ಹಾಡುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನ ನಡೆಯಲಿದೆ.
ಕೊಂಕಣಿ ಭಾಷೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
