ಕನಕಪುರ: ನಮ್ಮ ಆಹ್ವಾನದ ಮೇರೆಗೆ ಪ್ರಧಾನಮಂತ್ರಿಯವರು ಮೆಟ್ರೋ ಗುಲಾಬಿ ಮಾರ್ಗವನ್ನು ಉದ್ಘಾಟಿಸಲು ನವೆಂಬರ್ 13 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಕೆಲವರು ಪ್ರಧಾನಿಯನ್ನು ನಾವು ಆಹ್ವಾನಿಸಿದ್ದು ಎಂದು ಪ್ರಚಾರ ಗಿಟ್ಟಿಸುತ್ತಿದ್ದಾರೆ. ಬಿಜೆಪಿಯವರಿಗೂ ಇದಕ್ಕೂ ಏನು ಸಂಬಂಧ? ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಜನರ ದುಡ್ಡು. ನಾವು ಸಾಲವನ್ನು ಪಡೆದು ಮೆಟ್ರೋ ಅಭಿವೃದ್ಧಿ ಮಾಡುತ್ತಿದ್ದೇವೆ. ಕೆಲವು ವಿಚಾರಗಳನ್ನು 13 ರಂದು ಪ್ರಧಾನಿಗಳ ಮುಂದೆ ಮಂಡಿಸಲಿದ್ದೇನೆ” ಎಂದರು.
ದೆಹಲಿಯಲ್ಲಿ ರಾಹುಲ್ ಗಾಂಧಿಯವರು ಪಿಸಿಸಿ ಅಧ್ಯಕ್ಷರನ್ನು ಹಾಗೂ ಸಿ ಎಲ್ ಪಿ ನಾಯಕರನ್ನು ಸಂಜೆ ಸಭೆಗೆ ಕರೆದಿದ್ದಾರೆ. ಒಂದೂವರೆ ಗಂಟೆಗಳ ಕಾಲ ಸಭೆ ನಡೆಯಲಿದ್ದು, ಹೀಗಾಗಿ ದೆಹಲಿಗೆ ತೆರಳುತ್ತಿದ್ದೇನೆ. ದೀಪಾವಳಿ ಹಬ್ಬವಿರುವುದರಿಂದ ದೆಹಲಿಯಲ್ಲಿ ಯಾರನ್ನೂ ಭೇಟಿ ಮಾಡುತ್ತಿಲ್ಲ ಎಂದರು.
