ಗೋಕಾಕ:ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಮನವಿ ಮಾಡಿಕೊಂಡರು. ಅಹವಾಲುಗಳನ್ನು ಶಾಂತಚಿತ್ತದಿಂದ ಆಲಿಸಿದ ಸಚಿವರು, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ನೇಮಕಗೊಂಡ ಶ್ರೀಮತಿ ಶಹನಾಜ್ ಗಲಾಬ ಗಡೇಕಾಯಿ ಅವರು ಸಚಿವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಈ ವೇಳೆ ಸಚಿವರ ಆಪ್ತ ಸಹಾಯಕರಾದ ಶ್ರೀ ಅರವಿಂದ ಕಾರ್ಚಿ ಅವರು ಹಾಗೂ ಇನ್ನಿತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು
