ಸಂಬಳವಿಲ್ಲದ ರಸ್ತೆಗಳಿದ ಸ್ವಚ್ಛತಾ ವಾಹನ ಚಾಲಕರು; ಸದಾಶಿವನಗರ ಸ್ಮಶಾನದ ಬಳಿ ವಾಹನ ನಿಲ್ಲಿಸಿ ಆಕ್ರೋಶ!

ಬೆಳಗಾವಿ: ವೇತನ ಪಾವತಿಸದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರು ಪ್ರತಿಭಟನೆ ನಡೆಸಿದರು. ಸದಾಶಿವನಗರ ಸ್ಮಶಾನದ ಬಳಿ ವಾಹನಗಳನ್ನು ನಿಲ್ಲಿಸಿ, ಚಾಲಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಹಲವು ತಿಂಗಳಿಂದ ವೇತನ ಬಾಕಿ ಉಳಿದಿದ್ದು, ಇದರಿಂದಾಗಿ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಬಾಕಿ ವೇತನ ಪಾವತಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ವೇತನ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಿಂದಾಗಿ ಆ ಭಾಗದಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ತಮ್ಮ ಬೇಡಿಕೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಲಿಖಿತ ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಚಾಲಕರು ಎಚ್ಚರಿಕೆ ನೀಡಿದರು.

error: Content is protected !!