ಬಿಜೆಪಿ ಸದಸ್ಯತ್ವ ಅಭಿಯಾನ ಸಮರೋಪಾದಿಯಲ್ಲಿ ನಡೆಯಲಿ: ಶಾಸಕ ಪ್ರಭು ಚವ್ಹಾಣ

ಔರಾದ್‌ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

—-

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸೆ.9ರಂದು ಔರಾದ್‌ನಲ್ಲಿ ಚಾಲನೆ ನೀಡಿದರು.

 

ಈ ವೇಳೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ದೇಶದ ಬಹುದೊಡ್ಡ ರಾಷ್ಟಿçÃಯ ಪಕ್ಷವಾಗಿದೆ. ಪ್ರಜಾಪ್ರಭುತ್ವದ ಮಾದರಿಯಲ್ಲಿ ಕೆಲಸ ಮಾಡುವ ಅಪರೂಪದ ಪಕ್ಷ ಇದಾಗಿದ್ದು, ದೇಶಾದ್ಯಂತ ಸದಸ್ಯತಾ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ.

 

ಔರಾದ(ಬಿ) ವಿಧಾನಸಭಾ ಕ್ಷೇತ್ರದಿಂದ 1.2 ಲಕ್ಷ ಸದಸ್ಯರನ್ನು ನೋಂದಾಯಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರಿಗೆ ಭರವಸೆ ನೀಡಿದ್ದೇನೆ. ಕಾರ್ಯಕರ್ತರ ಮೇಲಿನ ಭರವಸೆಯಿಂದ ಮಾತು ಕೊಟ್ಟಿದ್ದು, ಕಾರ್ಯಕರ್ತರು ಚುರುಕಿನಿಂದ ಕೆಲಸ ಮಾಡಿ ಮಾತು ಉಳಿಸಬೇಕೆಂದು ಹೇಳಿದರು.

 

ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರಗಳ ಪ್ರಮುಖರು ಇನ್ನಷ್ಟು ಚುರುಕಾಗಬೇಕು. ಬೂತ್ ಅಧ್ಯಕ್ಷರು ಹಾಗೂ ತಂಡದವರ ಮೇಲೆ ಹೆಚ್ಚಿನ ಜವಾಬ್ದಾರಿಯಿದ್ದು, ತಮ್ಮ ತಂಡದೊAದಿಗೆ ಗ್ರಾಮದ ಮನೆ-ಮನೆಗೆ ಬೇಟಿ ನೀಡಿ ಸದಸ್ಯರ ನೋಂದಣಿ ಮಾಡಬೇಕು. ಮೊದಲಿಗೆ ತಾವು ಸ್ವತಃ ಸದಸ್ಯತ್ವ ಪಡೆಯಬೇಕು. ನಂತರ ತಮ್ಮ ಮನೆಯ ಸದಸ್ಯರು ಮತ್ತು ಗ್ರಾಮಸ್ಥರ ಹೆಸರನ್ನು ನೋಂದಾಯಿಸಬೇಕು ಎಂದು ಸೂಚಿಸಿದರು.

 

ಪಕ್ಷದ ಸದಸ್ಯತ್ವ ಪಡೆದವರಿಗೆ ಮಾತ್ರ ಪಕ್ಷವು ಸೂಕ್ತ ಸ್ಥಾನಮಾನಗಳು ಮತ್ತು ಪ್ರಾತಿನಿಧ್ಯ ಕಲ್ಪಿಸುತ್ತದೆ. ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ಪಕ್ಷವು ಪರಿಗಣನೆಗೆ ತೆಗೆದುಕೊಳ್ಳುವುದರಿಂದ ಕಾರ್ಯಕರ್ತರು ಹೆಚ್ಚೆಚ್ಚು ಸದಸ್ಯರನ್ನು ಸೇರ್ಪಡೆ ಮಾಡಬೇಕು. ಪ್ರತಿ ಬೂತ್‌ನಿಂದ ಗರಿಷ್ಠ ಮಟ್ಟದಲ್ಲಿ ಸದಸ್ಯರನ್ನು ನೋಂದಣಿಯಾಗಬೇಕು. ಪ್ರತಿ ಗ್ರಾಮ, ತಾಂಡಾ, ವಾಡಿ ಹೀಗೆ ಕ್ಷೇತ್ರದ ಯಾವೊಂದು ಪ್ರದೇಶವು ಸದಸ್ಯತಾ ಅಭಿಯಾನದಿಂದ ಹೊರಗೆ ಉಳಿಯಬಾರದೆಂದು ಹೇಳಿದರು.

 

ಹಿಂದೆಲ್ಲ ಸದಸ್ಯತಾ ಅಭಿಯಾನಗಳು ಆಫ್‌ಲೈನ್ ಮುಖಾಂತರ ನಡೆಸಲಾಗುತ್ತಿತ್ತು. ಕಾಲಕ್ಕೆ ತಕ್ಕಂತೆ ಬಿಜೆಪಿ ಪಕ್ಷವು ಆಧುನಿಕತೆಗೆ ಮಾರ್ಪಾಡು ಹೊಂದಿದ್ದು, ಆನ್‌ಲೈನ್ ಮುಖಾಂತರ ಪಕ್ಷದ ಸದಸ್ಯತ್ವ ನೋಂದಣಿಗೆ ಮುಂದಾಗಿದೆ. ದೂರವಾಣಿ 8800002024 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಸದಸ್ಯತ್ವ ಪಡೆಯಬಹುದು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಪಕ್ಷದ ಸದಸ್ಯರಾಗಲು ಅರ್ಹತೆ ಹೊಂದಿದ್ದರಿAದ ಲಿಂಗ, ಜಾತಿ, ಧರ್ಮ ಯಾವುದೇ ಬೇಧವಿಲ್ಲದೇ ಪ್ರತಿಯೊಬ್ಬರನ್ನು ಪಕ್ಷದ ಸದಸ್ಯರನ್ನಾಗಿಸಲು ಮುಂದಾಗಬೇಕು ಎಂದರು.

 

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ಸಾಕಷ್ಟು ಪ್ರಗತಿ ಸಾಧಿಸುತ್ತಿದೆ. ವಿಶ್ವದ ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸಿದೆ. ಭಾರತವನ್ನು ವಿಶ್ವಗುರುವನ್ನಾಗಿಸಲು ಶ್ರಮ ವಹಿಸುತ್ತಿರುವ ಪ್ರಧಾನಿಯವರ ಕೈ ಬಲಪಡಿಸಬೇಕಿದೆ. ಈ ದಿಶೆಯಲ್ಲಿ ಕಾರ್ಯಕರ್ತರು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಬೇಕು. ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಕಾರ್ಯರ್ಕರಿಗೆ ಹೇಳಿದರು.

 

ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಮಾತನಾಡಿ, ಪ್ರಜಾತಂತ್ರದ ಮಾದರಿಯಲ್ಲಿ ಕೆಲಸ ಮಾಡುವ ಭಾರತೀಯ ಜನತಾ ಪಕ್ಷ ಅತ್ಯಂತ ಶಿಸ್ತಿನ ಪಕ್ಷವಾಗಿದ್ದು, ಪ್ರತಿ 6 ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುತ್ತದೆ. ಈ ಬಾರಿ ವಿಭಿನ್ನವಾಗಿ ಆನ್‌ಲೈನ್ ಮುಖಾಂತರ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹುರುಪಿನಿಂದ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಪ್ರತಿ ಬೂತ್‌ನಿಂದ ಕನಿಷ್ಠ 400 ಸದಸ್ಯರಾದರು ಸೇರ್ಪಡೆಯಾಗಬೇಕು. ಬಿಜೆಪಿ ಸದಸ್ಯತ್ವ ಅಭಿಯಾನದಿಂದ ಔರಾದ(ಬಿ) ಕ್ಷೇತ್ರ ರಾಜ್ಯಮಟ್ಟದಲ್ಲಿ ಗುರುತಿಸುವ ರೀತಿಯಲ್ಲಿ ಕೆಲಸ ಮಾಡಬೇಕೆಂದು ತಿಳಿಸಿದರು.

 

ಮಾಜಿ ಶಾಸಕರಾದ ಗುಂಡಪ್ಪ ಬಿರಾದಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ಹಿಂದೆAದು ಕಾಣದ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದೆ. ನಾವೆಲ್ಲರೂ ಅವರಿಗೆ ಶಕ್ತಿ ನೀಡುವ ಕೆಲಸ ಮಾಡಬೇಕಿದೆ. ಸದಸ್ಯತ್ವ ಅಭಿಯಾನವು ಯಶಸ್ವಿಯಾಗಿ ನಡೆದರೆ ಅವರಿಗೆ ಶಕ್ತಿ ನೀಡಿದಂತಾಗುತ್ತದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಿರಣ ಪಾಟೀಲ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷಿö್ಮÃ ಕೌಟಗೆ ಅವರು ಮಾತನಾಡಿದರು.

 

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಅಲ್ಮಾಜೆ, ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೀಲೇಶ ರಕ್ಷಾö್ಯಳೆ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸರುಬಾಯಿ ವೈಜಿನಾಥ ಘೂಳೆ, ಉಪಾಧ್ಯಕ್ಷೆ ರಾಧಾಬಾಯಿ ಕೃಷ್ಣ ನರೋಟೆ, ಎಪಿಎಂಸಿ ಮಾಜಿ ಅಧ್ಯಕ್ಷ ಬಾಬುರಾವ ವಾಡಿ, ಮಂಡಲ ಉಪಾಧ್ಯಕ್ಷ ಶಿವಕುಮಾರ ಪಾಂಚಾಳ, ಗಣೇಶ ಕಾರೆಗಾವೆ, ರಾಮರೆಡ್ಡಿ ಪಾಟೀಲ, ಅಶೋಕ ಅಲಮಾಜೆ, ಸದಸ್ಯತ್ವ ಅಭಿಯಾನದ ಸಹ ಸಂಚಾಲಕ ಸಚಿನ ಬಿರಾದಾರ, ಬಂಟಿ ರಾಂಪೂರೆ, ಮುಖಂಡರಾದ ಉಮೇಶ ನಾಯಕ್, ಬಾಲಾಜಿ ನಾಯಕ್, ಈರೆಡ್ಡಿ, ಸಂತೋಷ ಪೋಕಲವಾರ, ಸುಜಿತ ರಾಠೋಡ್, ಗೋವಿಂದ ರೆಡ್ಡಿ, ರಮೇಶ ಗೌಡ, ಗೀತಾ ಗೌಡಾ ಸೇರಿದಂತೆ ಪಕ್ಷದ ಮುಖಂಡರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಖಂಡೋಬಾ ಕಂಗಟೆ ನಿರೂಪಿಸಿದರು. ಬಸವರಾಜ ಹಳ್ಳೆ ವಂದೆ ಮಾತರಂ ಗೀತೆ ಹಾಡಿದರು.

 

ಮನೆ-ಮನೆಗೆ ಭೇಟಿ: ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಬಿಜೆಪಿ ಸದಸ್ಯತ್ವ ಅಭಿಯಾನದಡಿ ಸೆ.9ರಂದು ಔರಾದ(ಬಿ) ಪಟ್ಟಣದ ವಿವಿಧ ಮನೆಗಳಿಗೆ ಭೇಟಿ ನೀಡಿದರು. ಹಿರಿಯರಾದ ಡಾ.ವೈಜಿನಾಥ ಬುಟ್ಟೆ, ಕಿರಣಕುಮಾರ ಉಪ್ಪೆ ಅವರ ಮನೆಗೆ ತೆರಳಿ, ಪಕ್ಷದ ಸದಸ್ಯತ್ವದ ಪ್ರಮಾಣ ಪತ್ರವನ್ನು ನೀಡಿದರು. ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಎಲ್ಲ ಕಾರ್ಯಕರ್ತರು ಹೀಗೆ ಮನೆ-ಮನೆಗೆ ಭೇಟಿ ನೀಡಿ ಅಭಿಯಾನವನ್ನು ಯಶಶ್ವಿಗೊಳಿಸಬೇಕೆಂದು ತಿಳಿಸಿದರು.

 

ವರದಿ : ರಾಚಯ್ಯ ಸ್ವಾಮಿ