ಕೇಂದ್ರ ಸರ್ಕಾರದ ಸ್ವಾಮ್ಯದ ಕಚೇರಿಗಳಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೀದರ್ ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಪ್ರತಿಭಟನೆ

ಕೇಂದ್ರ ಸರ್ಕಾರದ ಸ್ವಾಮ್ಯದ ಕಚೇರಿಗಳಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬೀದರ ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು

 

ಹಿಂದಿ ದಿವಸ್ ಆಚರಣೆಗೆ ತೀವ್ರ ವಿರೋಧ

ಕಪ್ಪು ಪಟ್ಟಿ ಕಟ್ಟಿಕೊಂಡು ಕರವೇ ಪ್ರತಿಭಟನೆ

 

ಕೇಂದ್ರ ಸರ್ಕಾರದ ಸ್ವಾಮ್ಯದ ಕಚೇರಿಗಳಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹಿಂದಿ ಅಧಿಕೃತ ರಾಷ್ಟ್ರೀಯ ಭಾಷೆಯಲ್ಲ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವ ಕನ್ನಡ ಸೇರಿದಂತೆ 22 ಭಾಷೆಗಳಲ್ಲಿ ಅದು ಕೂಡ ಒಂದು ಆದರೆ ದೇಶದ ಎಲ್ಲೆಡೆ ಹಿಂದಿ ಭಾಷೆಯನ್ನು ಹೇರುತ್ತಿರುವುದು ಹಾಗೂ ಸರ್ಕಾರ ಜನರ ತೆರಿಗೆ ಹಣದಲ್ಲಿ ಹಿಂದಿ ಭಾಷೆಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸರಿಯಲ್ಲ ಎಂದು ನೇತೃತ್ವ ವಹಿಸಿದ್ದ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಹೇಳಿದರು.

 

ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಗೆ ವಿಶೇಷ ಮನ್ನಣೆ ನೀಡುವ 343 ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳು ಸಮಾನ ಎಂದು ಸಾರಬೇಕು. ಕರ್ನಾಟಕದಲ್ಲಿನ ಎಲ್ಲ ಕೇಂದ್ರ ಸರ್ಕಾರದ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಬಗೆಯ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಸಬೇಕು. ಕರ್ನಾಟಕದಲ್ಲಿ ತ್ರಿ ಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ, ಮುಖಂಡರಾದ ಸೋಮಶೇಖರ ಸಜ್ಜನ್, ಉದಯಕುಮಾರ ಅಷ್ಟೂರೆ, ಶಿವರುದ್ರ ತೀರ್ಥ, ಮಲ್ಲಿಕಾರ್ಜುನ ಸಿಕೇನಪುರೆ, ಗೋಪಾಲ ಕುಲಕರ್ಣಿ, ವೀರಶೆಟ್ಟಿ ಗೌಸಪುರೆ, ವೀರೇಶ ರೆಡ್ಡಿ, ಮಹೇಶ ಕಾಪಸೆ, ತುಕಾರಾಮ ಜೈರಾಮ್ ನಾಗಯ್ಯ ಸ್ವಾಮಿ ಪವನಗೊಂಡ ಸಂಜು ರೆಡ್ಡಿ ನಾಗೇಶ್ ರೆಡ್ಡಿ ಪ್ರಮೋದ್ ಚಿದಿರಿ ಶಿವು ಹೊಕ್ರಾಣ ಚಂದು ಚಂದನ ಕೇರಿ ಕಿರಣ್ ಮೀನ್ ಕಿರಿ ಚೇತನ ದುಮ್ಮನ್ಸೂರ್ ಮಹೇಶ್ ಶಿವಕುಮಾರ್ ಬನಗುಂಡಿ ಮತ್ತಿತರರು ಭಾಗವಹಿಸಿದ್ದರು.