ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದೆ ವಿನಯ ಆಸುಂಡೆ

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದೆ ವಿದ್ಯಾರ್ಥಿಗಳು ತಮ್ಮ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸಿಕೊಳ್ಳುವುದ ಜೊತೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿದರೆ ಜನರ ಜೀವನ ಮಟ್ಟ ಉತ್ತಮಗೊಳ್ಳುಲು ಸಾಧ್ಯವಾಗಯತ್ತದೆ ಎಂದು ಖ್ಯಾತ ಲೆಕ್ಕಪರಿಶೋಧಕ ವಿನಯ ಆಸುಂಡೆ ಹೇಳಿದರು

ಅವರು ಜಾಧವಜೀ ಶಿಕ್ಷಣ ಸಂಸ್ಥೆ ಜೆ ಎ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ An insight on C A Foundation ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರತಿಯೊಬ್ಬರಿಗೆ ಪೌಷ್ಟಿಕ ಆಹಾರ, ಉತ್ತಮ ಪರಿಸರ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಸಾಧ್ಯವೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಶ್ರೀ ಎಂ.ಪಿ.ಮೇತ್ರಿ ಮಾತುನಾಡುತ್ತಾ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಗುಣಮಟ್ಟ ಶಿಕ್ಷಣ ಪಡೆಯಬೇಕು ಎಂಬುದು ಮಹಾವಿದ್ಯಾಲಯದ ಉದ್ದೇಶವಾಗಿದೆ.ಈ ಕಾರಣಕ್ಕಾಗಿ ಬೇರೆ ಬೇರೆ ವಿಭಾಗದ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳ ಬೇಕೆಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು. ಭಾರತಿ ಅಡಹಳ್ಳಿ ಕಾರ್ಯಕ್ರಮ ನಿರೂಪಿಸಿದರು.ಸುರೇಶ ದಾಸರಡ್ಡಿ,ಶಂಕರ ಕಮತಗಿ, ರಮೇಶ ಮಾಳಿ,ಅನಿಲ ಅಂಕಲಗಿ,ಪೂಜಾ ಭಂಗಿ,ಆಶಾ ಹೀರೇಮಠ ಸೇರಿದಂತೆ ಅನೇಕರು ಇದ್ದರು.

ವರದಿ ಭರತೇಶ ನಿಡೋಣಿ