ಔರಾದ್ : ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದಿಂದ ಅಕ್ಟೋಬರ್ 2ರಂದು ಬುಧವಾರ ಮುಂಜಾನೆ 11 ಗಂಟೆಗೆ ಪಟ್ಟಣದ ಕನಕ ಭವನದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದ ಸಂಚಾಲಕರಾದ ಬಿ.ಕೆ ಸುಹಾಸಿನಿ ಬಹೀನಜಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು ತಾಲೂಕಿನ 200ಕ್ಕೂ ಹೆಚ್ಚು ಜನ ಶಿಕ್ಷಕರಿಗೆ ಪ್ರಮಾಣಪತ್ರ ನೀಡುವ ಮೂಲಕ ಸತ್ಕರಿಸಲಾಗುತ್ತಿದೆ. ಕಳೆದ ವರ್ಷವು ಶಿಕ್ಷಕರ ದಿನಾಚರಣೆ ಮಾಡಲಾಗಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ ಕಾರ್ಯಕ್ರಮ ಉದ್ಘಾಟಿಸುವರು. ರಾಜಯೋಗಿನಿ ಬಿ.ಕೆ ಸುಹಾಸಿನಿ ಬಹೀನಜಿ ಅಧ್ಯಕ್ಷತೆ ವಹಿಸಲಿದ್ದಾರೆ. ತಹಸೀಲ್ದಾರ ಮಲ್ಲಶೆಟ್ಟಿ ಚಿದ್ರೆ, ಬಿಇಒ ಸುಧಾರಣೆ ನಾಯ್ಕ್, ಸಿಪಿಐ ರಘುವೀರಸಿಂಗ್ ಠಾಕೂರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ರಾಚಯ್ಯ ಸ್ವಾಮಿ