ಭಾಲ್ಕಿ ತಾಲೂಕಿನ ಖಟಕ್ ಚಿಂಚೋಳಿ ಕುರುಬಖೇಳ್ಗಿ ಗ್ರಾಮಗಳ ಹೆಸರು ಕಾಳು ಖರೀದಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ತಂಡ ಭೇಟಿ

ಬೀದರ : ಜಿಲ್ಲೆಯಾದ್ಯಂತ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ FAQ ಗುಣಮಟ್ಟದ ಹೆಸರು ಕಾಳನ್ನು ಖರೀದಿಸುವ ಪ್ರಕ್ರೀಯೆ ಅಕ್ಟೋಬರ್ 3 ರಿಂದ ಪ್ರಾರಂಭವಾಗಿದ್ದು. ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ನೊಂದಣಿ ಮಾಡಿಕೊಂಡು ಹೆಸರು ಕಾಳು ಬೆಳೆದ ರೈತರು FAq ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಾಲಗೆ ರೂ. 8682 ರೂ. ದರದಂತೆ ನೊಂದಣಿ ಮಾಡಿಕೊಂಡ ಖರೀದಿ ಕೇಂದ್ರಗಳಲ್ಲಿ ರೈತರು ಮಾರಾಟ ಮಾಡಬಹುದಾಗಿದೆ.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಹಾಗೂ ಕುರುಬಖೇಳ್ಗಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಖರೀದಿ ಪ್ರಕ್ರಿಯೆಯನ್ನು ಪರಿವೀಕ್ಷಿಸಿದರು. ಈ ಸಂದರ್ಭದಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಮುಕುಲ್ ಜೈನ್. ಭಾಲ್ಕಿ ತಹಶಿಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ. ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶಿವಾನಂದ ಕುಂಬಾರ. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!